ಅಬ್ದುಲ್ ಬಾಷಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ತನ್ವೀರುಲ್ ಇಸ್ಲಾಂ ಮದ್ರಸ ವಿದ್ಯಾರ್ಥಿ ಹಾಗೂ ಉಪ್ಪಿನಂಗಡಿ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಅಬ್ದುಲ್ ಬಾಷಿತ್ ರಚಿಸಿದ “ಸೀವಿಂಗ್ ಚಯರ್ ಫಾರ್ ಹ್ಯಾಂಡಿಕ್ಯಾಪ್ಸ್” ಎಂಬ ವಿಜ್ಞಾನ ಮಾದರಿ ಕೇಂದ್ರ ಸರಕಾರದ ವಿಜ್ಞಾನ – ತಂತ್ರಜ್ಞಾನ ಸಚಿವಾಲಯದ ನಡೆಸುವ ಇನ್ ಸ್ಪಾಯರ್ ಅವಾರ್ಡ್ ಮಾನಕ್ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದಕ್ಕೆ ಆಯ್ಕೆಯಾಗಿದ್ದಾರೆ. ಇದೇ ಸೆಪ್ಟೆಂಬರ್ 14 ರಿಂದ 20ರವರೆಗೆ ದೆಹಲಿಯ ಕ್ಯಾಂಪಸ್ ನಲ್ಲಿ ನಡೆಯುವ ಸ್ಪರ್ಧೆಯಲ್ಲಿ ಅಬ್ದುಲ್ ಬಾತಿಷ್ ಮಾದರಿಯನ್ನು ಪ್ರದರ್ಶಿಸಲಿದ್ದಾನೆ. ಬಾಷಿತ್ ನಿಗೆ SKSBV ತನ್ವೀರುಲ್ ಇಸ್ಲಾಂ ಮದ್ರಸ ವತಿಯಿಂದ ಸನ್ಮಾನಿಸಲಾಯಿತು. ಬಾಷಿತ್ ರವರು ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿ ಸಮೀಪದ ಕಡವಿನಬಾಗಿಲು ಇಲ್ಯಾಸ್ ಪಾಷ ಹಾಗೂ ಸಬಿಯರವರ ಮಗ.