January 19, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶರಣ್ ಪಂಪ್ವೆಲ್, ಭರತ್ ಕುಮ್ಡೆಲು ಹಾಗೂ ಯಶೋಧರ ಕರ್ಬೆಟ್ಟು ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಕೇಸು ದಾಖಲು

ಬಂಟ್ವಾಳ:  ಧರ್ಮನಿಂದನೆ, ಕೋಮು ಪ್ರಚೋಧನಾಕಾರಿ ಹೇಳಿಕೆಯನ್ನು ನೀಡಿ ಶಾಂತಿ ಮತ್ತು ನೆಮ್ಮದಿಯನ್ನು ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೆಲ್ ಅವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಸಪ್ಟಂಬರ್ 16ರಂದು ಬಿ.ಸಿ. ರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಭಜರಂಗದಳ- ವಿ.ಎಚ್.ಪಿ.ಯವರ ಬಿ‌.ಸಿ. ರೋಡ್ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶರಣ್ ಪಂಪ್ವೆಲ್ ಹಾಗೂ ಭರತ್ ಕುಮ್ಡೆಲು ಅವರು ಮುಸ್ಲಿಂ ಸಮುದಾಯದ ಭಾವನೆಗೆ ಮತ್ತು ಧರ್ಮದ ಘನತೆಗೆ ಧಕ್ಕೆ ಉಂಟಾಗುವಂತೆ ಮತ್ತು ಪ್ರಚೋದನಾಕಾರಿ ಭಾಷಣದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿಯಲ್ಲಿ ಮಾತನಾಡಿ, ಹಿಂದೂ ಮತ್ತು ಮುಸ್ಲಿಂ ಸಮುದಾಯದ ನಡುವೆ ದ್ವೇಷ ಸಂಘರ್ಷ ಉಂಟಾಗುವ ರೀತಿಯಲ್ಲಿ ಮಾತನಾಡಿದ್ದಲ್ಲದೆ, ವಿಡಿಯೋವನ್ನು ಸಾಮಾಜಿಕ ‌ಜಾಲತಾಣದಲ್ಲಿ ಹರಿಯಬಿಟ್ಟಿದ್ದು ಈ ಬಗ್ಗೆ ಬಿ. ಮೂಡ ಗ್ರಾಮದ ಬಂಟ್ವಾಳ ಕೆಳಗಿನ ಪೇಟೆ ನಿವಾಸಿ ಮಹಮ್ಮದ್ ರಫೀಕ್ ಎಂಬವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಯಶೋಧರ ಕರ್ಬೆಟ್ಟು ವಿರುದ್ಧ ದೂರು.

ಮುಸ್ಲಿಂ ಧರ್ಮವನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದ ಯಶೋಧರ ಕರ್ಬೆಟ್ಟು ಎಂಬಾತನ ಮೇಲೆ ಕಾನೂನು ಕ್ರಮ ಜರಗಿಸುವಂತೆ ಬಂಟ್ವಾಳ ನಿವಾಸಿ ಮಹಮ್ಮದ್ ಸಪ್ನಾಜ್ ನವಾಜ್ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ನೀಡಿದ್ದು ಈತನ ವಿರುದ್ಧವೂ ದೂರು ದಾಖಲಾಗಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

You may also like

News

ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಎಸ್. ನಂಜುಂಡಯ್ಯ ಚಾಮರಾಜನಗರ ಆಯ್ಕೆ

ಕಾಸರಗೋಡು : ಸಂಘಟಕ, ಸಾಹಿತಿ ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮೊದಲಾಗಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಎಸ್.
News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ

You cannot copy content of this page