ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉಜಿರೆಯ ಅನುಗ್ರಹ ಶಾಲೆಗೆ ಸ್ಕೌಟ್ ಮತ್ತು ಗೈಡ್ ವಿಭಾಗದಲ್ಲಿ ಪ್ರಶಸ್ತಿ
ಉಜಿರೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಸ್ಕೌಟ್ ಭವನ ಮೂಡಬಿದ್ರೆಯಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯು ಗೈಡ್ಸ್ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಮತ್ತು ಸ್ಕೌಟ್ಸ್ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದು ಪ್ರಶಸ್ತಿಯನ್ನು ತನ್ನದಾಗಿಸಿರುತ್ತದೆ.
ಪ್ರಶಸ್ತಿ ಪಡೆದ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರು, ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ.