October 16, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅನಂತಾಡಿಯ ನವ ಭಾರತ್ ಯುವಕ ಸಂಘ (ರಿ.) ವತಿಯಿಂದ 6ನೇ ವರ್ಷದ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಕಾರ್ಯಕ್ರಮ

ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನವಭಾರತ್ ಯುವಕ ಸಂಘ (ರಿ.) ಇದರ ವತಿಯಿಂದ ಸಪ್ಟಂಬರ್ 22ನೇ ಆದಿತ್ಯವಾರ ಅನಂತಾಡಿ ಪಡಿಪೆರೆ ಗದ್ದೆಯಲ್ಲಿ 6ನೇ ವರ್ಷದ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಕಾರ್ಯಕ್ರಮ ನಡೆಯಲಿರುವುದು.

     

ಕಾರ್ಯಕ್ರಮದ ಧ್ವಜಾರೋಹಣವನ್ನು ಡಾಕ್ಟರ್ ರೂಪಲತಾ ಕೊಂಗಲಾಯಿ ನೆರವೇರಿಸಲಿದ್ದು, ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅನಂತಾಡಿ ಶ್ರೀ ಉಳ್ಳಾಲ್ತಿ ದೇವಸ್ಥಾನದ ಆಡಳಿತ ಮುಖ್ಯಸ್ಥ ನರೇಂದ್ರ ರೈ ನೆಲ್ತೋಟು ಮಾಡಲಿದ್ದಾರೆ. ದೇವಸ್ಥಾನದ ಅರ್ಚಕ ಗೋಪಾಲಕೃಷ್ಣ ಬನ್ನಿಂತಾಯ ಕ್ರೀಡಾ ಜ್ಯೋತಿಯನ್ನು ಪ್ರಜ್ವಲಿಸಿ, ಕ್ರೀಡಾಕೂಟದ ಕೆಸರುಗದ್ದೆಯ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರ ಸಂಘದ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಹಾಗೂ ವಿಠಲ ಕೋಟ್ಯಾನ್ ಪೊಯ್ಯೇ ಮಾಡಲಿರುವರು.

ಕೆಸರು ಗದ್ದೆಯಲ್ಲಿ ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಪುರುಷರಿಗೆ, ವಿವಿಧ ಕ್ರೀಡಾ ಕೂಟಗಳನ್ನು ನಡೆಸಲಾಗುವುದು ಹಾಗೂ ಈ ಸಂದರ್ಭದಲ್ಲಿ ನಮ್ಮ ತುಳುವ ಸಂಸ್ಕೃತಿಯ ಚಾಪೆ, ಬುಟ್ಟಿ ಹಾಗೂ ತೆಂಗಿನಗರಿ ನೆಯ್ಯುವುದು, ಮುಟ್ಟಾಲೆ ಕಟ್ಟುವುದು, ಅಕ್ಕಿ ಮುಡಿ ಕಟ್ಟುವ ಪ್ರಾತ್ಯಕ್ಷತೆ ನಡೆಸಲಾಗುವುದು.

ವಿಶೇಷ ಸಾಧನೆಗೈದ ಮಹನೀಯರಾದ ಗಂಗಾಧರ ಕರಿಯ ಪಂಡಿತ್ ಗೋಳಿಕಟ್ಟೆ, ವೈಶಾಕ್ ವೈಭವ್ ಮಡಿವಾಳ ಅನಂತಾಡಿ ಇವರುಗಳನ್ನು ಅಭಿನಂದಿಸಲಾಗುವುದು. ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟನೆಯ ಅಧ್ಯಕ್ಷ ಅನೀಶ್ ಅಶ್ವತ್ತಾಡಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

     

You may also like

News

ವಿಟ್ಲ, ಬಂಟ್ವಾಳ ಪೊಲೀಸ್ ಠಾಣಾ ಸಹಿತ 20 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಬಂಧನ

20 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಸಜಿಪ ಮೂಡ ಗ್ರಾಮದ ನಿವಾಸಿ  32 ವರ್ಷ ಪ್ರಾಯದ ವಾರೆಂಟ್ ಅಸಾಮಿ ಫಾರೂಕ್ @ ಉಮ್ಮರ್
News

ರಾಜ್ಯ ಮಾಹಿತಿ ಆಯೋಗಕ್ಕೆ ಮೂವರು ಹೊಸ ಆಯುಕ್ತರ ನೇಮಕ

ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಡಾ. ಮಹೇಶ್ ವಾಲ್ವೇಕರ್ ಹಾಗೂ ವೆಂಕಟ್ ಸಿಂಗ್ ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಖಾಲಿ ಇದ್ದ ಮೂವರು ಆಯುಕ್ತರ ಹುದ್ದೆಗಳನ್ನು ಅಕ್ಟೋಬರ್

You cannot copy content of this page