July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ವಿಟ್ಲ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲ ಇಲ್ಲಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ಇದರ ಆಶಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರಗಿತು. ಅಖಿಲ ಕರ್ನಾಟಕ ಜನಜಾಗತಿ ವೇದಿಕೆ ವಿಟ್ಲ ವಲಯ ಅಧ್ಯಕ್ಷ ಕೃಷ್ಣಯ್ಯ ಬಳ್ಳಾಲ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಕ್ಷಣಿಕ ಸುಖಗೋಸ್ಕರ ಕೆಟ್ಟ ದುರಭ್ಯಾಸಗಳಿಗೆ ದಾಸರಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ವಿದ್ಯಾರ್ಥಿಗಳಿಗೆ ಮನವಿ ಮಾಡಿ ಗ್ರಾಮಾಭಿವೃದ್ಧಿ ಯೋಜನೆಯ  ಮೂಲಕ ನೀಡುವ  ಮಾಹಿತಿಯನ್ನು ಪಡೆದು ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದರು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಟಿಐ ಕಾಲೇಜ್ ಪ್ರಾಂಶುಪಾಲ ಹರೀಶ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಆರೋಗ್ಯ ಮೇಲ್ವಿಚಾರಕ ಜಯರಾಮ ಪೂಜಾರಿ ಮಾಹಿತಿ ನೀಡಿ ದುರಭ್ಯಾಸಕ್ಕೆ ಕಾರಣವಾದ ಮಾದಕ ದ್ರವ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಇದಕ್ಕೆ ಸರಕಾರವು ಮಾದಕ ದ್ರವ್ಯಗಳನ್ನು ನಿಷೇಧ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ. ವಿದ್ಯಾರ್ಥಿಗಳು ಮಾದಕ ದ್ರವ್ಯಗಳನ್ನು ಸೇವನೆ ಮಾಡಿ ಸಮಾಜದ ಸ್ವಾಸ್ಥ್ಯ ಹಾಲು ಮಾಡುತ್ತಿದ್ದಾರೆ. ದುರಭ್ಯಾಸಗಳಾದ ಡ್ರಗ್ಸ್, ಮಡ್ಕ, ಸಿಗರೇಟ್ ಗಳಿಂದ ಆಗುವ ಸಮಸ್ಯೆಗಳ ಬಗ್ಗೆ ವಿವರಿಸಿದರು. 

 

ಮಕ್ಕಳಿಗೆ ಸ್ವಾಸ್ಥ್ಯ ಸಂಕಲ್ಪದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಜನಜಾಗೃತಿ ವೇದಿಕೆ ಸದಸ್ಯ ನಟೇಶ ವಿಟ್ಲ, ಕಾಲೇಜ್ ಉಪನ್ಯಾಸಕರು, ಸೇವಪ್ರತಿನಿದಿ ಆಶಾ, ಕುಮಾರಿ ಚೇತನ ಉಪಸ್ಥಿತರಿದ್ದರು. ಉಪನ್ಯಾಸಕ ಮಂಜೇಶ್ ಪ್ರಾರ್ಥಿಸಿ, ಉಪನ್ಯಾಸಕಿ ಜೋಯ್ಲಿನ್ ಸ್ವಾಗತಿಸಿ, ಉಪನ್ಯಾಸಕ ಶರತ್ ವಂದಿಸಿ, ವಲಯ ಮೇಲ್ವಿಚಾರಕಿ  ಸರಿತಾ ಕಾರ್ಯಕ್ರಮ ನಿರೂಪಿಸಿದರು.

   

You may also like

News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ
News

Former CSST General Councillor Sr Josephette Passes Away

The Congregation of the Carmelite Sisters of Saint Teresa (CSST) is mourning the passing of Sr Josephette, former General Councillor

You cannot copy content of this page