ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್ ಸಹಾಯಧನ ಹಸ್ತಾಂತರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಸಾಲೆತ್ತೂರು ವಲಯ ಸಜಿಪ ಮೂಡ ಕಾರ್ಯಕ್ಷೇತ್ರದ ರೋಹಿತಾಶ್ವ ಪಟ್ಟುಗುಡ್ಡೆ ಇವರು ಕಳೆದ 2 ತಿಂಗಳಿಂದ ಬ್ರೈನ್ ಟ್ಯೂಮರ್ ಸಮಸ್ಯೆಯಿಂದ ಬಳಲುತಿದ್ದು ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ಮಂಜೂರಾದ ಸಹಾಯಧನ ಕ್ರಿಟಿಕಲ್ ಫಂಡ್ ರೂಪಾಯಿ 30 ಸಾವಿರ ಮೊತ್ತದ ಮಂಜೂರಾತಿ ಪತ್ರವನ್ನು ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್, ಒಕ್ಕೂಟದ ಅಧ್ಯಕ್ಷ ರಮೇಶ್ ಮೂಲ್ಯ, ಶ್ರೀ ಶಾರದಾ ಭಜನಾ ಮಂದಿರ ನಗ್ರಿ ಅಧ್ಯಕ್ಷ ಕೃಷ್ಣಪ್ಪ, ಸ್ಥಳೀಯರಾದ ಮೋಹನ್ ದಾಸ್ ಪೂಜಾರಿ, ಸಾಲೆತ್ತೂರು ವಲಯದ ಮೇಲ್ವಿಚಾರಕಿ ಸವಿತಾ, ಸೇವಾ ಪ್ರತಿನಿಧಿ ಪ್ರಮೀಳಾ ಉಪಸ್ಥಿತರಿದ್ದರು.