October 16, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ  

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬಂಟ್ವಾಳ ತಾಲೂಕು ಘಟಕವು ಹಿರಿಯ ವಿದ್ಯಾರ್ಥಿ ಸಂಘ ಸರಕಾರಿ ಪ್ರೌಢಶಾಲೆ ಮಂಚಿ – ಕೊಳ್ನಾಡು  ಇದರ ಸಹಯೋಗದಲ್ಲಿ  ಬಂಟ್ವಾಳ ತಾಲೂಕು 23 ನೇ ಕನ್ನಡ ಸಾಹಿತ್ಯ ಸಮ್ಮೇಳನ – 2024  ಆಯೋಜಿಸುವ ಕುರಿತು ಪೂರ್ವಭಾವಿ ಸಭೆಯು ಮಂಚಿ ಕೊಳ್ನಾಡು ಪ್ರೌಢಶಾಲಾ ಸಭಾಂಗಣದಲ್ಲಿ ಸಪ್ಟಂಬರ್ 22ರಂದು ಭಾನುವಾರ ನಡೆಯಿತು.

ಬಂಟ್ವಾಳ ತಾಲೂಕು ಸಾಹಿತ್ಯ ಪರಿಷತ್ತು ಘಟಕದ ಗೌರವ ಕಾರ್ಯದರ್ಶಿ ವಿ. ಸುಬ್ರಹ್ಮಣ್ಯ ಭಟ್ ಮಾತನಾಡಿ, “ಸಾಹಿತ್ಯ ಸಮ್ಮೇಳನವೆಂದರೆ ಅದು ಅವಿಸ್ಮರಣೀಯವಾಗಿ ಉಳಿಯುವಂಥದ್ದಾಗಿದೆ. ಹೋಬಳಿ, ತಾಲೂಕು, ಜಿಲ್ಲೆ ಅಥವಾ ಅಖಿಲ ಭಾರತ ಸಮ್ಮೇಳನವೆಂದು ತಾರತಮ್ಯ ಮಾಡಬೇಕಿಲ್ಲ. ಎಲ್ಲೆಡೆಯ ಸಾಹಿತ್ಯ ಪ್ರತಿಭೆಗಳಿಗೆ ಅವಕಾಶವೆಂಬ ವೇದಿಕೆ ಸಿದ್ಧವಾಗಬೇಕಾಗಿದೆ. ಮಂಚಿಯಂತಹ ಗ್ರಾಮೀಣ ಪ್ರದೇಶದಲ್ಲಿ ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜನೆಗೆ ಮನಸು ಮಾಡಿರುವ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಇಲ್ಲಿನ ನಾಗರಿಕರು ಅಭಿನಂದನಾರ್ಹರು.” ಎಂದರು.

ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಸಮಿತಿಯನ್ನು ರಚನೆ ಮಾಡಲಾಯಿತು. ಸಮಿತಿಯ ಕಾರ್ಯಾಧ್ಯಕ್ಷರಾಗಿ ಉದ್ಯಮಿ ಲಯನ್ ಹಾಜಿ ಸುಲೈಮಾನ್ ನಾರ್ಶ, ಅಧ್ಯಕ್ಷರಾಗಿ ಲಯನ್ ಸತೀಶ್ ಆಳ್ವ ಬಾಳಿಕೆ, ಪ್ರಧಾನ ಕಾರ್ಯದರ್ಶಿಯಾಗಿ ಉಪನ್ಯಾಸಕ ಎಂ. ಡಿ. ಮಂಚಿ, ಕೋಶಾಧಿಕಾರಿಯಾಗಿ ಹಾಜಿ ಸುಲೈಮಾನ್ ಜಿ. ಸುರಿಬೈಲು ಇವರನ್ನು ಆಯ್ಕೆ ಮಾಡಲಾಯಿತು ಹಾಗೂ ಇನ್ನಿತರ ಸಮಿತಿಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

      ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ವಿಶ್ವನಾಥ್ ಬಂಟ್ವಾಳ, ಕೋಶಾಧಿಕಾರಿ ಡಿ.ಬಿ. ಅಬ್ದುಲ್ ರಹಿಮಾನ್, ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಅಶ್ರಫ್, ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷ  ಜಿ. ಇಬ್ರಾಹಿಂ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಸೆರ್ಕಳ, ಕೊಳ್ನಾಡು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸುಶೀಲ ವಿಟ್ಲ ಉಪಸ್ಥಿತರಿದ್ದರು. ಸರಕಾರಿ ಪ್ರೌಢಶಾಲೆ ಮಂಚಿ – ಕೊಳ್ನಾಡು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲಯನ್ ರಾಮ್ ಪ್ರಸಾದ್ ರೈ ತಿರುವಾಜೆ ಸ್ವಾಗತಿಸಿ,  ಉಪನ್ಯಾಸಕ ಎಂ. ಡಿ. ಮಂಚಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನ್ಯಾಯವಾದಿ ರವೀಂದ್ರ ಕುಕ್ಕಾಜೆ ವಂದಿಸಿದರು.  ಬಂಟ್ವಾಳ ತಾಲೂಕು ಸಾಹಿತ್ಯ ಪರಿಷತ್ ಘಟಕದ ಗೌರವ ಕಾರ್ಯದರ್ಶಿ ಲಯನ್ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು.

You may also like

News

ವಿಟ್ಲ, ಬಂಟ್ವಾಳ ಪೊಲೀಸ್ ಠಾಣಾ ಸಹಿತ 20 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಬಂಧನ

20 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಸಜಿಪ ಮೂಡ ಗ್ರಾಮದ ನಿವಾಸಿ  32 ವರ್ಷ ಪ್ರಾಯದ ವಾರೆಂಟ್ ಅಸಾಮಿ ಫಾರೂಕ್ @ ಉಮ್ಮರ್
News

ರಾಜ್ಯ ಮಾಹಿತಿ ಆಯೋಗಕ್ಕೆ ಮೂವರು ಹೊಸ ಆಯುಕ್ತರ ನೇಮಕ

ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಡಾ. ಮಹೇಶ್ ವಾಲ್ವೇಕರ್ ಹಾಗೂ ವೆಂಕಟ್ ಸಿಂಗ್ ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಖಾಲಿ ಇದ್ದ ಮೂವರು ಆಯುಕ್ತರ ಹುದ್ದೆಗಳನ್ನು ಅಕ್ಟೋಬರ್

You cannot copy content of this page