ಉಜಿರೆಯ ಕುಮಾರಿ ವಿಲೋನಾ ಡಿಕುನ್ಹಾ ರಾಷ್ಟ್ರಮಟ್ಟದ ಥ್ರೋಬಾಲ್ ಸ್ಪರ್ಧೆಗೆ ಆಯ್ಕೆ
ಉಜಿರೆ : ಕುಮಾರಿ ವಿಲೋನಾ ಡಿಕುನ್ಹಾ ಇವರು 34ನೇ ಜೂನಿಯರ್ ನ್ಯಾಷನಲ್ಸ್ ಥ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದು, ಅಕ್ಟೋಬರ್ 03 ರಿಂದ 05 ರವರೆಗೆ ತೆಲಂಗಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಉಜಿರೆ ಹಲಕೆ ನಿವಾಸಿ ರಿಚರ್ಡ್ ಡಿಕುನ್ಹಾ ಹಾಗೂ ಅನಿತಾ ಡಿಸೋಜ ದಂಪತಿಯ ಪುತ್ರಿಯಾಗಿದ್ದು, ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿನಿಯಾಗಿದ್ದು ಪ್ರಸ್ತುತ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜ್ ನಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಇವರಿಗೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಚಾಲಕರು, ಪ್ರಾಂಶುಪಾಲರು, ಆಡಳಿತ ಮಂಡಳಿ, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.