January 20, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪತ್ರಕರ್ತರಿಗೆ ಕರ್ನಾಟಕದಲ್ಲಿ ಉಚಿತ ಬಸ್ ಪಾಸ್ – ಸಿಎಂ ಸಿದ್ದರಾಮಯ್ಯ ಆದೇಶ

ಸಪ್ಟಂಬರ್ 26: ಪತ್ರಕರ್ತರ ದಶಕಗಳ ಬೇಡಿಕೆಯಾದ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆದೇಶ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಭರವಸೆಯನ್ನು ನೀಡಿದ್ದರು. ಆ ಭರವಸೆ ಇಂದು ಈಡೇರಿದಂತೆ ಆಗಿದೆ.  

ಉಚಿತ ಬಸ್ ಪಾಸ್ ಬೇಡಿಕೆಯನ್ನು ದಡ ಮುಟ್ಟಿಸುವಲ್ಲಿ ಯಶಸ್ವಿಯಾದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರ ನಿರಂತರ ಶ್ರಮಕ್ಕೆ ಸಾರ್ಥಕತೆ ದೊರೆತಿದೆ ಎಂದು ಸಿಎಂ ಮಾಧ್ಯಮ ಹೇಳಿಕೆ ನೀಡಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಡಿ 2024-25ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆ 431ರಲ್ಲಿ “ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಬಸ್ ಪಾಸ್ ಸೌಲಭ್ಯವನ್ನು ಪ್ರಾರಂಭಿಸಲಾಗುವುದು” ಎಂದು ಘೋಷಿಸಲಾಗಿರುತ್ತದೆ. ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೌಲಭ್ಯವನ್ನು ಅನುಷ್ಠಾನಗೊಳಿಸುವುದಕ್ಕೆ ಸಂಬಂಧಿಸಿದಂತೆ 2024ರ ಮಾರ್ಚ್ 21ರಂತೆ ಮಾಧ್ಯಮ ಪಟ್ಟಿಯಲ್ಲಿರುವ ಮುದ್ರಣ ವಿದ್ಯುನ್ಮಾನ ಮಾಧ್ಯಮಗಳ ಸಂಖ್ಯಯನ್ನಾಧರಿಸಿ, ರಾಜ್ಯಾದ್ಯಂತ ಒಟ್ಟು 5222 ಪತ್ರಕರ್ತರಿಗೆ ಈ ಯೋಜನೆಯನ್ನು ಒದಗಿಸಲು, ಕೆ.ಎಸ್.ಆರ್.ಟಿ.ಸಿ. ಸಂಸ್ಥೆಯು ಮುಂದಾಗಿದೆ.

ಸದರಿ ಲೆಕ್ಕಚಾರದಂತೆ ಪ್ರತಿ ತಿಂಗಳಿಗೆ 1,30,55,000/- ರೂಪಾಯಿಗಳು ಹಾಗೂ ವಾರ್ಷಿಕ ಅಂದಾಜು ಅನುದಾನ 15,66,60,000/- ರೂಪಾಯಿಗಳ ಅವಶ್ಯಕತೆ ಇರುತ್ತದೆ ಎಂದು ಅಂದಾಜಿಸಲಾಗಿದೆ. ಪತ್ರಿಕೆಗಳ ಸಂಖ್ಯೆ ಹಾಗೂ ವಿದ್ಯುನ್ಮಾನ ವಾಹಿನಿಗಳ ಸಂಖ್ಯೆ ಹೆಚ್ಚಾದಂತೆ ಪತ್ರಕರ್ತರ ಸಂಖ್ಯೆಯೂ ಸಹ ಹೆಚ್ಚಾಗುವುದರಿಂದ ಅಂದಾಜು ವೆಚ್ಚವೂ ಸಹ ಹೆಚ್ಚಾಗುವ ಸಾಧ್ಯತೆ ಇರುವುದಾಗಿ ತಿಳಿಸುತ್ತಾ, ಬೇಕಾಗುವ ಅನುದಾನದ ವಿವರಗಳ ಅಂದಾಜು ವೆಚ್ಚ ಹಾಗೂ ಸದರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಮಾರ್ಗಸೂಚಿಗಳನ್ನು ಒಳಗೊಂಡ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಿ, ಯೋಜನೆಯ ಅನುಷ್ಠಾನಕ್ಕೆ ಸರ್ಕಾರದ ಆದೇಶ ಹೊರಡಿಸುವಂತೆ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆದೇಶ ಹೊರಡಿಸಿದೆ.

You may also like

News

ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಎಸ್. ನಂಜುಂಡಯ್ಯ ಚಾಮರಾಜನಗರ ಆಯ್ಕೆ

ಕಾಸರಗೋಡು : ಸಂಘಟಕ, ಸಾಹಿತಿ ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮೊದಲಾಗಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಎಸ್.
News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ

You cannot copy content of this page