October 16, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲ ಕುದ್ದುಪದವು ಲೈಂಗಿಕ ದೌರ್ಜನ್ಯ ಆರೋಪಿ ಅಂಗಡಿಗೆ ಬೆಂಕಿ

ವಿಟ್ಲ : ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ದೌರ್ಜನ್ಯ ಎಸೆಗಿದ್ದ ಆರೋಪಿಯ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ವಿಟ್ಲದಲ್ಲಿ ನಡೆದಿದೆ.

 

ಕೆಲವು ದಿನಗಳ ಹಿಂದೆ ಕುದ್ದುಪದವು ನಿವಾಸಿ ಅಶ್ರಫ್ ಎಂಬಾತ ಅಂಗಡಿಗೆ ತೆರಳಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 ಅಶ್ರಫ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೇವಲ ಒಂದು ವಾರದಲ್ಲಿ ಆರೋಪಿಗೆ ಜಾಮೀನು ಮಂಜೂರಾಗಿತ್ತು. ಇದೀಗ ಆರೋಪಿ ಅಶ್ರಫ್ ನ ಗೂಡಂಗಡಿಗೆ ಯಾರೋ ಕಿಡಿಗೇಡಿಗಳು ನಿನ್ನೆ ತಡರಾತ್ರಿ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ತಡರಾತ್ರಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಬಗ್ಗೆ ಗಮನಿಸಿದ ರಸ್ತೆಯಲ್ಲಿ ತೆರಳುತ್ತಿದ್ದ ವಾಹನ ಚಾಲಕರು ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ .

You may also like

News

RSS ಚಟುವಟಿಕೆಗಳಿಂದ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗಿದೆ – ಮಾಜಿ ಸಚಿವ ಬಿ. ರಮಾನಾಥ ರೈ

ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವು ಜಾತ್ಯತೀತತೆ ಅದಕ್ಕೇ ಜನ ಬೆಂಬಲ ರಾಜ್ಯದ ಸಚಿವರಾದ ಪ್ರಿಯಾಂಕ ಖರ್ಗೆ RSS ಚಟುವಟಿಕೆಗಳ ಕುರಿತು ನೀಡಿರುವ ಹೇಳಿಕೆ ಸರಿಯಾಗಿದೆ ಎಂದು ಮಾಜಿ
News

ದಕ್ಷಿಣ ಕನ್ನಡ ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ವಾರ್ಷಿಕ ಸಭೆ

ಮಾನವೀಯ ಸೇವೆ ರೆಡ್‌ಕ್ರಾಸ್ ಸಂಸ್ಥೆಯ ಗುರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ರಕ್ತದಾನ, ಆರೋಗ್ಯ ಕಾಳಜಿ, ವಿಪತ್ತು ಪರಿಹಾರ ಸಹಿತ ಹಲವು ಸೇವಾ ಕಾರ್ಯಗಳ ಮೂಲಕ ರೆಡ್‌ಕ್ರಾಸ್ 

You cannot copy content of this page