August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಿನ್ನಿಗೋಳಿ – ಪದ್ಮನ್ನೂರು ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿಯವರಿಗೆ ಐಕ್ಯ ವೇದಿಕೆ ಕೊಡಾಜೆ ವತಿಯಿಂದ ಅಭಿನಂದನೆ

ಕಿನ್ನಿಗೋಳಿ ಸಪ್ಟಂಬರ್ 28  : ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಕೊಡಾಜೆಯ ‘ಐಕ್ಯ ವೇದಿಕೆ ಕೊಡಾಜೆ’ ಇದರ ವತಿಯಿಂದ ಐಕ್ಯ-ಭಾವೈಕ್ಯತೆಯನ್ನು ಮೈಗೂಡಿಸಿಕೊಂಡು ಸರ್ವ ಧರ್ಮೀಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾನವೀಯ ಮೌಲ್ಯಗಳಿಗೆ ಒತ್ತು ನೀಡುತ್ತಿರುವ ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿ,  ಪದ್ಮನ್ನೂರು – ಕಿನ್ನಿಗೋಳಿ ಇದರ ಅದ್ಯಕ್ಷರು ಹಾಗೂ ಸರ್ವ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವು ಭಾನುವಾರ ಸಪ್ಟಂಬರ್ 29  ಸಂಜೆ ಸಂಜೆ 5.30ಕ್ಕೆ  ಪದ್ಮನ್ನೂರಿನ ಸಾರ್ವಜನಿಕ ಯಕ್ಷಗಾನ ಬಯಲಾಟ ಸುವರ್ಣ ಮಹೋತ್ಸವ ಸಭಾ ಭವನದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಸ್ಥಳೀಯ ದೇವಸ್ಥಾನದ ಅರ್ಚಕರು, ಮಸೀದಿ ಖತೀಬರು ಹಾಗೂ ಚರ್ಚ್ ನ ಧರ್ಮಗುರುಗಳಿಗೆ ಗೌರವಾರ್ಪಣೆ,  ಸಾರ್ವಜನಿಕ ಯಕ್ಷಗಾನ ಬಯಲಾಟ  ಸಮಿತಿಯ ಅಧ್ಯಕ್ಷರಿಗೆ ಸನ್ಮಾನ, ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ನೆರವೇರಲಿದೆ ಎಂದು ಐಕ್ಯ ವೇದಿಕೆ ಕೊಡಾಜೆ ಇವರ ಪ್ರಕಟಣೆ ತಿಳಿಸಿದೆ.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page