ಸ್ಥಳೀಯ ಸಂಸ್ಥೆಗಳ MLC ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ ಹೆಸರು ಮುಂಚೂಣಿಯಲ್ಲಿ
![](https://karavalisuddi.com/wp-content/uploads/2024/09/tumbe-prakash.webp)
MLC Election ಮಂಗಳೂರು: ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಎಂಎಲ್ಸಿ (MLC Election) ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಪ್ರಕಾಶ್ ಶೆಟ್ಟಿ ತುಂಬೆ ಇವರ ಹೆಸರು ಮುಂಚೂಣಿಗೆ ಬಂದಿದೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಕಾಶ್ ಶೆಟ್ಟಿ ತುಂಬೆ ಹಾಗೂ ಕಾರ್ಕಳದ ಕಾಂಗ್ರೆಸ್ ನಾಯಕ ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.
ಆದರೆ ಇನ್ನಷ್ಟು ಹೆಸರುಗಳು ಹೈಕಮಾಂಡ್ ಪಟ್ಟಿಯಲ್ಲಿ ತುಂಬಿಕೊಂಡಿದೆ ಎನ್ನಲಾಗುತ್ತಿದೆ. ಆದರೆ ಎರಡು ಹೆಸರುಗಳು ಮುಂಚೂಣಿಯಲ್ಲಿ ಇವೆ ಎಂದು ಕಾಂಗ್ರೆಸ್ ನ ಆಂತರಿಕ ಮೂಲಗಳು ಹೇಳಿಕೊಂಡಿವೆ.
ಈ ಬಗ್ಗೆ ಕಾಂಗ್ರೆಸ್ ಸಮಿತಿಯನ್ನು ರಚಿಸಿದ್ದು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಮಿತಿ ಹೈಕಮಾಂಡಿಗೆ ವರದಿ ನೀಡಲಿದೆ ಎಂದು ತಿಳಿದುಬಂದಿದೆ. ಆದರೆ ಬಿಜೆಪಿ ಇದುವರೆಗೆ ಯಾವುದೇ ಅಭ್ಯರ್ಥಿಗಳ ಘೋಷಣೆಯನ್ನು ಮಾಡಲಿಲ್ಲ. ಬಿಜೆಪಿ ಒಳಗಡೆ ಅಭ್ಯರ್ಥಿಯ ಬಗ್ಗೆ ಪೈಪೋಟಿ ಇರುವುದರಿಂದ ಅದು ಹೈಕಮಾಂಡ್ ಅಂಗಳಕ್ಕೆ ತಲುಪಿದೆ ಎನ್ನಲಾಗುತ್ತಿದೆ.