ಮಂಗಳೂರು – ಪಡೀಲ್ ನಲ್ಲಿ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇಂದು ಉದ್ಘಾಟನೆ, ಜನಪ್ರಿಯ ಸಮ್ಮಿಲನ

ಮಂಗಳೂರು ನಗರದ ಪಡೀಲ್‌ನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ‘ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ’ಯ ಉದ್ಘಾಟನಾ ಸಮಾರಂಭ ಇಂದು ಸಪ್ಟಂಬರ್ 29ರಂದು ಸಂಜೆ 4:00 ಗಂಟೆಗೆ ನಡೆಯಲಿದೆ.
ಕರ್ನಾಟಕ ವಿಧಾನ ವಿಧಾನ ಸಭಾ ಸ್ಪೀಕರ್ ಸನ್ಮಾನ್ಯ ಯು. ಟಿ. ಖಾದರ್ ನೂತನ ಆಸ್ಪತ್ರೆಯನ್ನು ಉದ್ಘಾಟಿಸಲಿರುವರು. ಆಸ್ಪತ್ರೆಯ ವಿಶೇಷ ವಿಭಾಗ ‘ಬರ್ತ್ ಆ್ಯಂಡ್ ಬ್ಲೂಮ್’: ತಾಯಿ ಮತ್ತು ಮಗುವಿನ ವಿಶೇಷ ಆರೈಕೆಯ ವಿಭಾಗವನ್ನು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ರುದ್ರಪ್ಪ ಪಾಟೀಲ್ ಉದ್ಘಾಟಿಸುವರು. ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಚೇಯರ್‌ಮೆನ್ ಡಾ. ಅಬ್ದುಲ್ ಬಶೀರ್ ವಿ.ಕೆ. ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಸಂಸದ ಬ್ರಿಜೇಶ್ ಚೌಟ, ಕಾಸರಗೋಡು ಸಂಸದ ರಾಜಮೋಹನ್ ಉನ್ನಿತ್ತಾನ್, ಹಾಸನ ಸಂಸದ ಶ್ರೇಯಸ್ ಪಾಟೀಲ್, ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್, ಕಾಸರಗೋಡು ಶಾಸಕ ಎನ್.ಎ. ನೆಲ್ಲಿಕುನ್ನು, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಎಂ. ಫಾರೂಕ್, ಕರ್ನಾಟಕ ರಾಜ್ಯ ಅಲೈಡ್ ಹೆಲ್ತ್‌ಕೇರ್ ಕೌನ್ಸಿಲ್ ಚೆಯರ್‌ಮ್ಯಾನ್ ಯು.ಟಿ. ಇಫ್ತಿಕಾರ್ ಅಲಿ, ಮಾಜಿ ಸಚಿವರುಗಳಾದ ಬಿ. ರಮಾನಾಥ ರೈ, ವಿನಯಕುಮಾರ್ ಸೊರಕೆ, ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹೀಂ, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಖ್ಯಾತ ವೈದ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಡಾ. ಅಬ್ದುಲ್ ಬಶೀರ್ ವಿ.ಕೆ. ಇವರ ನೇತೃತ್ವದ ಜನಪ್ರಿಯ ಸಮೂಹ ಸಂಸ್ಥೆ ಅಧೀನದ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಲ್ಲ ಆರೋಗ್ಯ ಸಮಸ್ಯೆಗಳಿಗೆ ತುರ್ತು ಪರಿಹಾರ ಒದಗಿಸಲು ನುರಿತ ವೈದ್ಯಕೀಯ ತಜ್ಞರು ಸಿದ್ದರಾಗಿದ್ದಾರೆ. ಕರ್ನಾಟಕದ ವೈದ್ಯಕೀಯ ಕ್ಷೇತ್ರದಲ್ಲಿ ಮತ್ತು ವಿಶ್ವದರ್ಜೆಯ ವೈದ್ಯಕೀಯ ಸೇವೆಗಳೊಂದಿಗೆ ರೋಗಿಗಳ ಆರೈಕೆಯನ್ನು ಮಾಡಲು ಸಿದ್ಧಗೊಂಡಿದೆ. ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ 130 ಬೆಡ್ ವ್ಯವಸ್ಥೆಯನ್ನು ಹೊಂದಿದೆ. ದಿನದ 24 ಗಂಟೆಯೂ ಪರಿಣಿತ ವೈದ್ಯರಿಂದ ಸೇವೆ ಲಭ್ಯವಾಗಲಿದ್ದು, ತುರ್ತು ಚಿಕಿತ್ಸಾ ವಿಭಾಗವೂ ಕಾರ್ಯಾಚರಿಸಲಿದೆ.