October 17, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೈಕ್ ಅಪಘಾತದಲ್ಲಿ ಸೂರಿಕುಮೇರು ನಿವಾಸಿ ಮೃತ್ಯು

ಬಂಟ್ವಾಳ :  ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿಯ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಬುಧವಾರ ಅಕ್ಟೋಬರ್ 2ರಂದು ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ‌ಘಟನೆ ಇಂದು ನಡೆದಿದೆ.

ಸೂರಿಕುಮೇರು ನೆಲ್ಲಿ ನಿವಾಸಿ ಸರ್ಪಾಝ್ (33) ಮೃತಪಟ್ಟ ವ್ಯಕ್ತಿಯಾಗಿದ್ದು, ಸಹಸವಾರಿಣಿ ವಿದ್ಯಾರ್ಥಿ ಜಾಸ್ಮೀನ್ (18) ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಸರ್ಪಾಝ್ ಇವರು ತಂಗಿಯನ್ನು ದೇರಳಕಟ್ಟೆ ಕಾಲೇಜಿಗೆ ಸ್ಕೂಟರ್ ನಲ್ಲಿ ಕರೆದುಕೊಂಡು ಹೋಗುವ ವೇಳೆ ಮೆಲ್ಕಾರ್ ನಿಂದ ಮುಡಿಪು ಮಾರ್ಗವಾಗಿ ಮಾರ್ನಬೈಲು ತಲುಪಿದಾಗ ಎದುರಿನಿಂದ ಅಜಾಗರೂಕತೆಯಿಂದ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ಇಮ್ತಿಯಾಜ್ ಎಂಬಾತ ಇವರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿ ರಭಸಕ್ಕೆ ಸ್ಕೂಟರ್ ಸವಾರ ಹಾಗೂ ಸಹ ಸವಾರಿಣಿ (ಅಣ್ಣ-ತಂಗಿ) ಇಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ‌ಗಾಯಗೊಂಡಿದ್ದರು. ತಕ್ಷಣ ಇಬ್ಬರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಗಂಭೀರವಾಗಿ ಗಾಯಗೊಂಡಿದ್ದ ಸರ್ಪಾಝ್ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

You may also like

News

ತಲೆಮರೆಸಿಕೊಂಡ ಆರೋಪಿಗಳ ಜಾಮೀನುದಾರರ ವಿರುದ್ದ ಕ್ರಮ

ಆರೋಪಿಗಳು ಸ್ವತಃ ನ್ಯಾಯಾಲಯಕ್ಕೆ ಶರಣು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆಯ ಆರೋಪಿಗಳ ಜಾಮೀನುದಾರರ
News

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸರಸ್ವತಿ ಮಂಟಪ ಲೋಕಾರ್ಪಣೆ

ಧರ್ಮಾಚರಣೆಯಿಂದ ಪ್ರಪಂಚಕ್ಕೆ ಶ್ರೇಯಸ್ಸು – ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಧರ್ಮಾಚರಣೆಯಿಂದ ಪ್ರಪಂಚಕ್ಕೆ ಶ್ರೇಯಸ್ಸು. ಧರ್ಮದಿಂದಲೇ ಸುಖ, ಸಂಪತ್ತು ಸಿದ್ಧಿಸುವುದು. ಜಗತ್ತಿನಲ್ಲಿ ಹಲವಾರು ಸೌಖರ್ಯಗಳಿದ್ದರೂ‌

You cannot copy content of this page