January 17, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದಲ್ಲಿ ಸಮನ್ವಯ ಶಿಕ್ಷಕರ ಸಂಘದ ವತಿಯಿಂದ ಬ್ಯಾರಿ ಭಾಷಾ ದಿನಾಚರಣೆ

ಬಂಟ್ವಾಳ : ಮಾತೃ ಭಾಷೆಯಲ್ಲಿ ಸಂವಹನ ಕಡಿಮೆಯಾದಾಗ ಮೂಲ ಪದಗಳು ಕಣ್ಮರೆಯಾಗಿ ಭಾಷಾ ಸಂರಚನೆಗೆ ಧಕ್ಕೆಯಾಗುತ್ತದೆ, ಆ ಮೂಲಕ ಭಾಷೆ ಅಳಿವಿನ ಹಾದಿ ಹಿಡಿಯುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್ ಎಸ್. ಅಭಿಪ್ರಾಯಪಟ್ಟರು.

ಅವರು ಸಮನ್ವಯ ಶಿಕ್ಷಕರ ಸಂಘದ ವತಿಯಿಂದ ಗುರುವಾರ ಅಕ್ಟೋಬರ್ 3ರಂದು ಬ್ರಹ್ಮರಕೂಟ್ಲು ಸುಹಾ ನಿವಾಸದಲ್ಲಿ ನಡೆದ ಬ್ಯಾರಿ ಭಾಷಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಬ್ಯಾರಿ ಭಾಷೆಯ ವೈಶಿಷ್ಟ್ಯತೆಗಳ ಕುರಿತು ಮಾತನಾಡಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಆಯುಕ್ತ ಮೊಹಮ್ಮದ್ ತುಂಬೆ, ಬ್ಯಾರಿ ಭಾಷಾ ದಿನಾಚರಣೆಯ ಶುಭಾಶಯ ಕೋರಿದರು.

ಸಮಾರಂಭದಲ್ಲಿ ಸಮನ್ವಯ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ನಾಸೀರ್ ಅಡೆಕಲ್, ಮೊಹಮ್ಮದ್ ಕೊಲ್ಲರಕೋಡಿ, ಅಬ್ದುಲ್ ಹಮೀದ್ ಮಾಣಿ, ನೂರುದ್ದೀನ್ ಅಕ್ಕರಂಗಡಿ, ಹೈದರ್ ಪಡಂಗಡಿ, ತಾಹಿರಾ ತುಂಬೆ, ಜಮೀಲಾ ತುಂಬೆ, ಲುಕ್ಮಾನ್ ವಿಟ್ಲ, ಶೇಖ್ ಆದಂ ಸಾಹೇಬ್ ನೆಲ್ಯಾಡಿ, ಹಸೀನಾ ಮಲ್ನಾಡ್ ಮೊದಲಾದವರು ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಯದರ್ಶಿ ಹಾರೀಶ್ ಬಾಂಬಿಲ ಸ್ವಾಗತಿಸಿ, ಸಂಘದ ಬಂಟ್ವಾಳ ಘಟಕಾಧ್ಯಕ್ಷ ಮೊಹಮ್ಮದ್ ಮನಾಝಿರ್ ಮುಡಿಪು ವಂದಿಸಿದರು. ಶಿಕ್ಷಕ ಅಕ್ಬರ್ ಉಳಿಬೈಲು ಕಾರ್ಯಕ್ರಮ ನಿರೂಪಿಸಿದರು.

You may also like

News

Faithful Depart with Blessings as the Infant Jesus Feast Ends in Mangaluru

The second day of the Infant Jesus Feast was a memorable and spiritually enriching experience for all attendees, with a
News

ಬೆನಕ ಆಸ್ಪತ್ರೆಯ ರಜತ ಸಂಭ್ರಮ – ಆಧುನಿಕ ತಂತ್ರಜ್ಞಾನದ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

ಉಜಿರೆ : “ರೋಗಿಗಳ ಸೇವೆಗೆ ಕೇಂದ್ರೀಕೃತವಾಗಿ ಅತ್ಯುತ್ತಮ ದರ್ಜೆಯ ಅರೋಗ್ಯ ಸುಶ್ರೂಷೆಯನ್ನು ಎಲ್ಲರಿಗೂ ಕೈಗೆಟಕುವ ದರದಲ್ಲಿ ಹಾಗೂ ಸಮುದಾಯದ ಆಶಯಗಳಿಗೆ ಅನುಗುಣವಾಗಿ ಒದಗಿಸುವ ಆಸ್ಪತ್ರೆಯಾಗಿ ಬೆಳೆಯಬೇಕು ಎಂಬುವುದು

You cannot copy content of this page