November 11, 2024
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೆಲ ಖಾಸಗಿ ಶಾಲೆಗಳಿಗೆ ಮಧ್ಯಂತರ ರಜೆ ಇನ್ನೂ ನೀಡಿಲ್ಲ ಪೋಷಕರ ಆಕ್ರೋಶ

ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಅಕ್ಟೋಬರ್ 3ರ ಗುರುವಾರದಿಂದ ಶಾಲಾ ಮಕ್ಕಳಿಗೆ ಮಧ್ಯಂತರ ರಜೆ ಆರಂಭವಾಗಬೇಕಿದ್ದರೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಕೆಲವು ಖಾಸಗಿ ಶಾಲೆಗಳು ಇನ್ನೂ ರಜೆ ನೀಡಿಲ್ಲ.

ಶಿಕ್ಷಣ ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿ ಅನುಸಾರ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ಶಿಕ್ಷಕರು ಬುಧವಾರ ಗಾಂಧಿ ಜಯಂತಿ ಕಾರ್ಯಕ್ರಮದ ಬಳಿಕ ಮಕ್ಕಳಿಗೆ ಮಧ್ಯಂತರ ರಜೆಯ ಮಾಹಿತಿ ನೀಡಿ ಕಳಹಿಸಲಾಗಿದೆ. ಆದರೆ, ಕೆಲವು ಖಾಸಗಿ ಶಾಲೆಗಳಲ್ಲಿ ಮಾತ್ರ ಇನ್ನೂ ರಜೆ ನೀಡಿಲ್ಲ.

ವೇಳಾಪಟ್ಟಿ ಪ್ರಕಾರ ಇಷ್ಟೊತ್ತಿಗೆ ಪೂರ್ಣಗೊಳಿಸಬೇಕಿದ್ದ ಅರ್ಧವಾರ್ಷಿಕ ಪರೀಕ್ಷೆಯನ್ನು ಇನ್ನೂ ನಡೆಸುತ್ತಿರುವ ಖಾಸಗಿ ಶಾಲೆಗಳು, ಮುಂದಿನ ವಾರದಿಂದ ತಮ್ಮ ಶಾಲೆಯ ಮಕ್ಕಳಿಗೆ ರಜೆ ನೀಡುವುದಾಗಿ ಹೇಳಿವೆ. ಇದು ಪೋಷಕರ ವಲಯದಲ್ಲಿ ಬಹಳ ಆಕ್ರೋಶಕ್ಕೆ ಕಾರಣವಾಗಿದೆ. ನಿಯಮ ಪ್ರಕಾರ ಅಕ್ಟೋಬರ್ 3ರಿಂದ 20ರವರೆಗೆ 18 ದಿನ ರಜೆ ನೀಡಬೇಕು.

ಆದರೆ, ಒಂದು ವಾರ ತಡ ಮಾಡಿದರೆ ಮಕ್ಕಳಿಗೆ ರಜೆ ಅವಧಿ ಕಡಿತವಾಗಲಿದೆ. ಶೈಕ್ಷಣಿಕ ವರ್ಷದ ಮಧ್ಯೆ ಕೆಲವು ದಿನ ಕುಟುಂಬದೊಂದಿಗೆ ಪೂರ್ಣಾವಧಿ ಕಾಲ ಕಳೆಯುವುದು, ಪ್ರವಾಸ, ಸಂಬಂಧಿಕರ ಮನೆಗೆ ಬೇಟಿ ಸೇರಿದಂತೆ ಮತ್ತಿತರೆ ಅವಕಾಶಗಳಿಗೆ ಸಮಯ ಸಿಗದಂತಾಗಲಿದೆ ಎಂಬುದು ಪೋಷಕರ ವಲಯದ ಅಸಮಾಧಾನವಾಗಿದೆ. ಶಿಕ್ಷಣ ಇಲಾಖೆ ಕೂಡಲೇ ಎಚ್ಚೆತ್ತುಕೊಳ್ಳಬೇಕಾಗಿ ಪೋಷಕರ ಮನವಿಯಾಗಿದೆ.

You may also like

News

ಕರಾವಳಿ ಸುದ್ದಿ ನೂತನ ವೆಬ್ ಸೈಟ್ ಉದ್ಘಾಟನೆ

  ಬಂಟ್ವಾಳ : ಕರಾವಳಿ ಸುದ್ದಿ ವಾರಪತ್ರಿಕೆಯ ನೂತನ ವೆಬ್ ಸೈಟ್ www.karavalisuddi.com ಸಪ್ಟೆಂಬರ್ 8ರ ಭಾನುವಾರ ಲೋಕಾರ್ಪಣೆಗೊಂಡಿತು. ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ನ ಧರ್ಮಗುರು
News

ಸೂರಿಕುಮೇರು ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ ಆಚರಣೆ

ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ಮೇರಿ ಮಾತೆಯ ವಾರ್ಷಿಕ ಹಬ್ಬ ಮೊಂತಿ ಹಬ್ಬವನ್ನು ಇಂದು ಸಪ್ಟಂಬರ್ 8ರಂದು ವಿಜೃಂಭಣೆ, ಸಂಬ್ರಮ, ಭಕ್ತಿ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಲಾಯಿತು.

You cannot copy content of this page