January 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಾಪತ್ತೆಯಾಗಿದ್ದ ಮುಮ್ತಾಜ್ ಆಲಿ ಮೃತದೇಹ ಕೂಳೂರು ಸೇತುವೆ ಬಳಿ ಪತ್ತೆ – ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಮಂಗಳೂರು: ಅಕ್ಟೋಬರ್ 6ರಂದು ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಇಂದು ಅಕ್ಟೋಬರ್ 7ರಂದು ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.

ರವಿವಾರ ಬೆಳಗ್ಗೆ ಉಡುಪಿ–ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಮುಮ್ತಾಝ್ ಅವರ ಕಾರು ಪತ್ತೆಯಾಗಿತ್ತು. ಅಲ್ಲದೆ, ಕಾರಿನ ಮುಂಭಾಗದ ಬಲಬದಿ ಅಪಘಾತ ನಡೆದಿರುವ ಕುರುಹುಗಳು ಪತ್ತೆಯಾಗಿತ್ತು. ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಈಗಾಗಲೇ ಕಾವೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (BNSS) 173ರ ಅಡಿ ಎಫ್ ಐ ಆರ್ ದಾಖಲಾಗಿದೆ.

You may also like

News

ಸೂರಿಕುಮೇರುವಿನ ಸೈಂಟ್ ಜೋಸೆಫ್ ಚರ್ಚ್‌ನಲ್ಲಿ ಬ್ರಷ್ಟಾಚಾರದ ಆರೋಪ ಸಂಪೂರ್ಣ ಸುಳ್ಳು – ಹಿಂದಿನ ಆಡಳಿತ ಮಂಡಳಿಯ ಖಡಕ್ ಸ್ಪಷ್ಟನೆ

ಬ್ರಷ್ಟಾಚಾರ ನಡೆದಿದ್ದರೆ ಧರ್ಮಾಧ್ಯಕ್ಷರ ಮೌನ ಹೇಗೆ ಸಾಧ್ಯ? – ಅಪಪ್ರಚಾರಕರಿಗೆ ಭಕ್ತಾಧಿಗಳ ನೇರ ಸವಾಲು ನಿಷ್ಟಾವಂತ ಸೇವೆ ನೀಡಿದ ಹಿಂದಿನ ಧರ್ಮಗುರುಗಳ ಹೆಸರುಗಳಿಗೆ ಮಸಿ ಬಳಿಸಲು ಷಡ್ಯಂತ್ರ
News

ತುಳುಕೂಟ ಥೈಲ್ಯಾಂಡ್ ಸಹಕಾರದಿಂದ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರ ಸಂಪೂರ್ಣ ಪುನರ್‌ನವೀಕರಣ – ಹಸ್ತಾಂತರ ಹಾಗೂ ಸೇವಾ ಕಾರ್ಯಕ್ರಮಗಳು ಯಶಸ್ವಿ

ಅಧ್ಯಕ್ಷ ವಿನಯ್ ರೈ ಅವರ ಕಾರ್ಯ ವೈಖರಿಗೆ ವ್ಯಾಪಕ ಮೆಚ್ಚುಗೆ ಬಟ್ಟಾರಬೆಟ್ಟು–ಅಳಪೆ–ಪಡೀಲ್‌ನ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರವು ತುಳುಕೂಟ ಥೈಲ್ಯಾಂಡ್‌ನ ಅಮೂಲ್ಯ ಸಹಕಾರದಿಂದ ಸಂಪೂರ್ಣವಾಗಿ ಪುನರ್‌ನವೀಕರಣಗೊಂಡಿದ್ದು, ಇದರ ಹಸ್ತಾಂತರ

You cannot copy content of this page