ಬಿ.ಎಂ. ಮುಮ್ತಾಝ್ ಆಲಿ ಅಗಲುವಿಕೆ ಸಮಾಜಕ್ಕೆ ತುಂಬಲಾರದ ನಷ್ಟ – ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲೆ

ಪುತ್ತೂರು : ಇಂದು ಅಗಲಿದ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಔದ್ಯಮಿಕ ಮೇರು ವ್ಯಕ್ತಿ ಬಿ.ಎಂ. ಮುಮ್ತಾಝ್ ಆಲಿ ಇವರ ಅಗಲುವಿಕೆಯು ಸಮಾಜಕ್ಕೆ ಹಾಗೂ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ.
ಹಲವಾರು ವಿದ್ಯಾ ಸಂಸ್ಥೆ ಹಾಗೂ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ ಅಜರಾಮರ ವ್ಯಕ್ತಿಯಾಗಿದ್ದರು. ಎಲ್ಲಾ ವಿಭಾಗದಲ್ಲಿ ಅವರ ಪಾತ್ರ ಅತ್ಯಂತ ಪ್ರಾಮುಖ್ಯತೆ ಪಡೆದಿತ್ತು. ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾಧ್ಯಕ್ಷರಾಗಿ, ಹಲವು ಶೈಕ್ಷಣಿಕ, ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿದ್ದರು. ಅವರು ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆಗೆ ಒತ್ತುಕೊಡುತ್ತಿದ್ದರು. ಅವರ ಮರಣದಲ್ಲಿ ಕೆಲವೊಂದು ಊಹಾಪೋಹಗಳಿದ್ದು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು.
ಮೃತರ ಪಾರತ್ರಿಕ ಮೋಕ್ಷಕ್ಕಾಗಿ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ವ್ಯಾಪ್ತಿಯ ಯುನಿಟ್, ಸರ್ಕಲ್, ಝೋನ್ ಗಳಲ್ಲಿ ಪ್ರತ್ಯೇಕ ಪ್ರಾರ್ಥನೆ ನಡೆಸಬೇಕಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.