August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಥೊಲಿಕ್ ಸಭಾ ಸಂಘಟನೆಯ ಹೋರಾಟಕ್ಕೆ ಸಿಕ್ಕಿದ ನ್ಯಾಯ – ಪಾವೂರು ಉಳಿಯ ದ್ವೀಪದ 2 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇಧಿಸಿ ಮಂಗಳೂರು ಸಹಾಯಕ ಆಯುಕ್ತರ ದಿಢೀರ್ ಆದೇಶ 

 

ಮಂಗಳೂರು : ಪಾವೂರು ಉಳಿಯ ದ್ವೀಪ  ಪರಿಸರದಲ್ಲಿ ವಾಸಿಸುತ್ತಿರುವ ನಾಗರಿಕರಿಗೆ, ಪರಿಸರಕ್ಕೆ ಹಾಗೂ ಇತರ ಸಂಪನ್ಮೂಲಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮತ್ತು ಅಕ್ರಮ ಮರಳುಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಪಾವೂರು ಉಳಿಯ ದ್ವೀಪದ ಸುತ್ತಮುತ್ತಲಿನ 2 ಕಿಲೋ ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಎಲ್ಲಾ ರೀತಿಯ ಮರಳುಗಾರಿಕೆಯನ್ನು ಸಂಪೂರ್ಣ ನಿಷೇಧಿಸಿ ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್ ಬುಧವಾರ ದಿಢೀರ್ ಆದೇಶ ಹೊರಡಿಸಿದ್ದಾರೆ.

ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇವರ ಪ್ರತಿಭಟನೆ ಹಾಗೂ ಮಾಧ್ಯಮಗಳ ವರದಿ ಬೆನ್ನಲ್ಲೇ ಜಿಲ್ಲಾಡಳಿತ ತುರ್ತು ಸಭೆ ನಡೆಸಿ ಈ ಆದೇಶ ಹೊರಡಿಸಿದೆ. ಈ ಹಿಂದೆ 2015ರಲ್ಲಿ ಜಿಲ್ಲಾಧಿಕಾರಿ ಆಗಿದ್ದ ಎ.ಬಿ. ಇಬ್ರಾಹಿಂ ಅವರು ಪಾವೂರು ಉಳಿಯ ದ್ವೀಪದ ಸುತ್ತ ಮರಳುಗಾರಿಕೆ ನಿಷೇಧ ಬಗ್ಗೆ ಆದೇಶ ಹೊರಡಿಸಿದ್ದರು. ಈ ಆದೇಶ ಕೆಲ ಸಮಯ ಮಾತ್ರ ಚಾಲ್ತಿಯಲ್ಲಿದ್ದು, ಆ ಬಳಿಕ ಅಕ್ರಮ ಮರಳುಗಾರಿಕೆ ದಿನನಿತ್ಯ ನಡೆಯುತ್ತಲೇ ಇತ್ತು.

ಇಂದು ಹೊರಡಿಸಿದ ಮಂಗಳೂರು ಸಹಾಯಕ ಆಯುಕ್ತರ ಆದೇಶದಲ್ಲಿ ನಿಷೇಧಿತ ಪ್ರದೇಶ ವ್ಯಾಪ್ತಿಯಲ್ಲಿ ಸಂಚಾರ ದೋಣಿಗಳ ಹೊರತಾಗಿ ಇತರ ಎಲ್ಲಾ ದೋಣಿ ಅಥವಾ ಯಂತ್ರಗಳ ಮೂಲಕ ಅಕ್ರಮ ಮರಳು ಉತ್ಪನ್ನ ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಲಾಗಿದೆ. ಅನಧಿಕೃತ ದಕ್ಕೆಗಳಲ್ಲಿ ಮರಳು ಶೇಖರಿಸುವುದನ್ನು ಮತ್ತು ವಾಹನಗಳಿಗೆ ಮರಳು ಹಂಚುವುದನ್ನು ಕೂಡ ತಕ್ಷಣದಿಂದ ನಿಷೇಧಿಸಲಾಗಿದೆ. ಆಡ್ಯಾರು ಗ್ರಾಮದ ವಳಚ್ಚಿಲ್ ದಕ್ಕೆ, ಆಡ್ಡ್ಯಾರು ಗ್ರಾಮ ಸಹ್ಯಾದ್ರಿ ಇಂಜಿನೀಯರಿಂಗ್ ಕಾಲೇಜಿನ ಹಿಂಭಾಗದ ದಕ್ಕೆ, ನದಿಯ ದ್ವೀಪದ ಎಡಭಾಗದಲ್ಲಿರುವ ಪಾವೂರು ದಕ್ಕೆ ಮರಳುಗಾರಿಕೆಗೆ ನಿಷೇಧಿತ ಪ್ರದೇಶವಾಗಿದೆ.

ನಿಷೇಧಾಜ್ಞೆಯನ್ನು ಉಲ್ಲಂಘಿಸುವ ಯಾವುದೇ ಪ್ರಕರಣಗಳು ಗಮನಕ್ಕೆ ಬಂದಲ್ಲಿ ಸಂಬಂಧಿಸಿದವರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page