September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕ್ಯಾನ್ಸರ್ ಪೀಡಿತರಿಗಾಗಿ  ಕೇಶದಾನಗೈದ  ವಿದ್ಯಾರ್ಥಿನಿ ಚಿರಣ್ಯ ಆರ್. ಪೂಜಾರಿ

ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಭ  ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಚಿರಣ್ಯ ಆರ್. ಪೂಜಾರಿ ಟೀಂ ಸೇವಾಪಥದ ಮೂಲಕ ಕ್ಯಾನ್ಸರ್ ಪೀಡಿತರಿಗಾಗಿ ತನ್ನ ಕೇಶ ದಾನಗೈದು ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ.

ಚಿರಣ್ಯ ಆರ್. ಪೂಜಾರಿ ವೀರಕಂಭ ಗ್ರಾಮದ ಗಣೇಶಕೋಡಿಯ ರಾಮಚಂದ್ರ ರೇಖಾ ದಂಪತಿಗಳ ಪುತ್ರಿಯಾಗಿದ್ದು, ತನ್ನ ಮಗಳನ್ನು ಕೇಶದಾನಗೈಯಲು ಪ್ರೇರಣೆ ನೀಡಿದ ರಾಮಚಂದ್ರರವರು ಆತ್ಮೀಯ ಮಿತ್ರರೆಲ್ಲರ ಸಹಕಾರದೊಂದಿಗೆ ಓಂ ಶ್ರೀ ಸಾಯಿಗಣೇಶ ಸೇವಾ ಸಂಘದ ಸಾರಥಿಯಾಗಿ ಅಶಕ್ತರಿಗೆ ನೆರವು ನೀಡುತ್ತಾ ಯುವಶಕ್ತಿ ಸೇವಾಪಥ, ಯುವಶಕ್ತಿ ರಕ್ತನಿಧಿಯ ಮೂಲಕ ಸಮಾಜ ಸೇವೆಗೆ ಸದಾ ಕೈ ಜೋಡಿಸುವ ಓರ್ವ ನಿಷ್ಠಾವಂತ ಕಾರ್ಯಕರ್ತರಾಗಿರುತ್ತಾರೆ. ಇವರ ಈ ಸೇವಾಕಾರ್ಯ ಎಲ್ಲರಿಗೂ ಪ್ರೇರಣೆಯಾಗಲಿ. ವಿದ್ಯಾರ್ಥಿನಿಯ ಈ ಸೇವಾ ಕಾರ್ಯಕ್ಕೆ ವಿದ್ಯಾರ್ಥಿನಿಯ ಕುಟುಂಬಸ್ಥರು, ಗ್ರಾಮಸ್ಥರು ಶಾಲಾ ಶಿಕ್ಷಕರು ಹಾಗೂ ಸಹಪಾಠಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

You may also like

News

₹29 Lakh Donation to Father Muller for Paediatric Cancer Care Through ‘Symphony of Hope’

Music, compassion and community come together to support children battling cancer In a remarkable initiative that brought together music, compassion
News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ

You cannot copy content of this page