August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆ ಶಂಭೂರು ಇಲ್ಲಿ ಬಾಳ್ತಿಲ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಮಕ್ಕಳ ಸಾಹಿತ್ಯ ಕಮ್ಮಟ

ಬಂಟ್ವಾಳ :  ಬಂಟ್ವಾಳ ತಾಲೂಕಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆ ಶಂಭೂರು ಇಲ್ಲಿ ಬಾಳ್ತಿಲ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಆಯ್ದ ಸಾಹಿತ್ಯಾಸಕ್ತ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗಾಗಿ ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಇವರ ವತಿಯಿಂದ ಒಂದು ದಿನದ ಸಾಹಿತ್ಯ ಸ್ವರಚನೆ ಪ್ರೇರಣಾ ಕಮ್ಮಟ ಅಕ್ಟೋಬರ್ 22ರಂದು ನಡೆಸಲಾಯಿತು.

ಬೊಂಡಾಲ ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ನಾಯಕ ಕೌಶಿಕ್ ಶೆಟ್ಟಿ ಕವನ ವಾಚಿಸಿ ಕಮ್ಮಟವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯ ಶಿಕ್ಷಕ ಕಮಲಾಕ್ಷ ಮಾತನಾಡಿ ಸಾಹಿತ್ಯವು ಬದುಕು ಕಟ್ಟಲು ಸಹಾಯಕ ಎಂದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಸ್ಕರ ಅಡ್ವಳ, ರಮೇಶ ಎಂ. ಬಾಯಾರು, ಪುಷ್ಪಾ ಎಚ್. ವಿಟ್ಲ ಭಾಗವಹಿಸಿದರು. ಕಮ್ಮಟದಲ್ಲಿ ಬಾಳ್ತಿಲ ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳ ಮೂವತ್ತೆರಡು ವಿದ್ಯಾರ್ಥಿಗಳು ಭಾಗವಹಿಸಿದರು.

ಅಪರಾಹ್ನ ಜರಗಿದ ಸಮಾರೋಪ ಸಮಾರಂಭದಲ್ಲಿ ಮಕ್ಕಳ ಸ್ವರಚನೆಗಳ ಹಸ್ತ ಪತ್ರಿಕೆಯನ್ನು ಶಂಭೂರು ಸರಕಾರಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಕಮಲಾಕ್ಷ ಅನಾವರಣ ಗೊಳಿಸಿದರು. ಈ ಸಂದರ್ಭದಲ್ಲಿ ರಮೇಶ ಎಂ. ಬಾಯಾರು, ಭಾಸ್ಕರ ಅಡ್ವಳ ಮತ್ತು ಪುಷ್ಪಾ ಎಚ್. ಇವರನ್ನು ಶಂಭೂರು ಪ್ರೌಢ ಶಾಲಾ ವತಿಯಿಂದ ಗೌರವಿಸಲಾಯಿತು.  ಬಾಳ್ತಿಲ ಕ್ಲಸ್ಟರ್ ಸಿ.ಆರ್.ಪಿ. ಸತೀಶ್ ರಾವ್, ಶಂಭೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ  ಜಯರಾಮ ಪಡ್ರೆ ಉಪಸ್ಥಿತರಿದ್ದರು. ಸಹ ಶಿಕ್ಷಕ ದೇವದಾಸ್ ಕೆ., ನರಿಕೊಂಬು ಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತ ಕುಮಾರಿ ಸಹಕರಿಸಿದರು.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page