August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಾರಾಯಣಗುರುಗಳು ಧಾರ್ಮಿಕ ಸ್ವಾತಂತ್ರ್ಯ ನೀಡಿದ ಮೌನಕ್ರಾಂತಿಯ ಹರಿಕಾರರು : ದಿನೇಶ್ ಸುವರ್ಣ ರಾಯಿ

ಬಂಟ್ವಾಳ: ಕೇರಳದ ಅರವೀಪುರದಲ್ಲಿ ಶಿವಲಿಂಗ ಪ್ರತಿಷ್ಠಾಪನೆ ಮಾಡುವ ಮೂಲಕ ಹಿಂದುಳಿದ ವರ್ಗಗಳ ಜನರಿಗೆ ಮೌನ ಕ್ರಾಂತಿಯ ಮೂಲಕ ಧಾರ್ಮಿಕ ಸ್ವಾತಂತ್ರ್ಯ ನೀಡಿದ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರುಗಳು ಎಂದು ಯುವವಾಹಿನಿ ಬಂಟ್ಟಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ತಿಳಿಸಿದರು.

ಅವರು ಅಕ್ಟೋಬರ್ 25ರಂದು ಬಂಟ್ವಾಳದ ಯಶೋಧರ ಪೂಜಾರಿ ಕಡಂಬಲ್ಕೆ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 17ರಲ್ಲಿ ಗುರುಸಂದೇಶ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ, ಪ್ರಥಮ ಉಪಾಧ್ಯಕ್ಷ ನಾರಾಯಣ ಪಲ್ಲಿಕಂಡ, ನಿರ್ದೇಶಕರಾದ ಮಧುಸೂದನ್ ಮಧ್ವ ಮತ್ತು ಮಹೇಶ್ ಬೊಳ್ಳಾಯಿ, ನಿಕಟಪೂರ್ವ ಅಧ್ಯಕ್ಷ ಹರೀಶ್ ಕುದನೆ, ಮಾಜಿ ಅಧ್ಯಕ್ಷರಾದ ನಾಗೇಶ್ ಪೊನ್ನೋಡಿ, ಪ್ರೇಮನಾಥ್ ಕರ್ಕೇರ, ಶಿವಾನಂದ ಎಂ., ಅರುಣ್ ಬಿ.ಸಿ. ರೋಡ್, ಸದಸ್ಯರಾದ ಯತೀಶ್ ಬೊಳ್ಳಾಯಿ, ಪ್ರಶಾಂತ್ ಏರಮಲೆ, ನಾಗೇಶ್ ಏಲಬೆ, ಜಗದೀಶ್ ಕಲ್ಲಡ್ಕ, ಸುನಿತಾ ನಿತಿನ್ ಮಾರ್ನಬೈಲ್, ಹರೀಶ್ ಅಜೆಕಲಾ, ಶೈಲಜಾ ಹರೀಶ್ ಉಪಸ್ಥಿತರಿದ್ದರು. ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿ ವಂದಿಸಿದರು.

You may also like

News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ
News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ

You cannot copy content of this page