August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಾಹಿತ್ಯ ತಾರೆ ಮತ್ತು ಬಾಲಬಂಧು ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಂಟ್ವಾಳ : “ಮಕ್ಕಳ ಕಲಾಲೋಕ” ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ವತಿಯಿಂದ 18ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು 2024ರ ನವಂಬರ್ ಎರಡನೆಯ ವಾರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಶಂಭೂರು  ಸಹಭಾಗಿತ್ವದಲ್ಲಿ ನಡೆಯದಿರುವುದು. ಈ ಸಂದರ್ಭದಲ್ಲಿ ತಾಲೂಕಿನಲ್ಲಿ 18ವರ್ಷ ಪ್ರಾಯದೊಳಗಿನ ಮಕ್ಕಳಿರುವ ಸರಕಾರಿ, ಅನುದಾನಿತ, ಅನುದಾನ ರಹಿತ ವಿದ್ಯಾಸಂಸ್ಥೆಗಳಲ್ಲಿ ಐದು ವರ್ಷಗಳ ಈಚೆಗೆ ಮಕ್ಕಳಿಗಾಗಿ ಸಾಹಿತ್ಯ ಹಾಗೂ ವಿವಿಧ ಕಲೆಗಳಲ್ಲಿ ಸಹಕರಿಸುತ್ತಿರುವ ಶಿಕ್ಷಕರು ಅಥವಾ ಸಾರ್ವಜನಿಕ ಕಲಾಗಾರರೊಬ್ಬರಿಗೆ ಸಮ್ಮೇಳನದಂದು ತಾಲೂಕು ಮಟ್ಟದ ಬಾಲಬಂಧು ಪುರಸ್ಕಾರವನ್ನು ನೀಡಲಾಗುತ್ತದೆ. ಅದೇ ರೀತಿ ಐದು ವರ್ಷಗಳ ಈಚೆಗೆ ಸಾಹಿತ್ಯಾದಿ ಕಲೆಗಳಲ್ಲಿ ಅತ್ಯುತ್ತಮವಾಗಿ ತೊಡಗಿಸಿಕೊಂಡ ಸರಕಾರಿ, ಅನುದಾನಿತ ಯಾ ಅನುದಾನ ರಹಿತ ಒಂದು ಶಾಲೆಗೆ ಸಾಹಿತ್ಯ ತಾರೆ ಪ್ರಶಸ್ತಿಯನ್ನು ನೀಡಲಾಗುವುದು.

ಸಾಹಿತ್ಯ ತಾರೆ ಪ್ರಶಸ್ತಿತಿಗಾಗಿ ತಾಲೂಕಿನಲ್ಲಿ 18ವರ್ಷ ಪ್ರಾಯದೊಳಗಿನ ಮಕ್ಕಳಿರುವ ಸರಕಾರಿ, ಅನುದಾನಿತ, ಅನುದಾನ ರಹಿತ ವಿದ್ಯಾಸಂಸ್ಥೆಗಳಲ್ಲಿ ಐದು ವರ್ಷಗಳ ಈಚೆಗೆ ಸಾಹಿತ್ಯ ಹಾಗೂ ಇತರ ಕಲೆಗಳಲ್ಲಿ ಮಾಡಿದ ಸಾಧನೆಗಳ ವಿವರಗಳನ್ನು ಬರೆದು ಕಳುಹಿಸಿರಿ. ಆಯ್ದ ಒಂದು ವಿದ್ಯಾ ಸಂಸ್ಥೆಗೆ “ಸಾಹಿತ್ಯ ತಾರೆ” ಪ್ರಶಸ್ತಿಯನ್ನು ನೀಡಲಾಗುವುದು. ಮಕ್ಕಳಿಗಾಗಿ ಸಾಹಿತ್ಯ ಹಾಗೂ ವಿವಿಧ ಕಲೆಗಳಲ್ಲಿ ಸಹಕರಿಸುತ್ತಿರುವ ಶಿಕ್ಷಕರು ಅಥವಾ ಸಾರ್ವಜನಿಕ ಕಲಾಗಾರರು ಸಾಧನೆಗಳ ವಿವರಗಳನ್ನು ಪಟ್ಟಿ ಮಾಡಿ ಕಳುಹಿಸಿರಿ. ಆಯ್ದ ಸಾಧಕರೊಬ್ಬರಿಗೆ “ಬಾಲ ಬಂಧು” ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಎರಡೂ ವಿವರಗಳನ್ನು 2024 ಅಕ್ಟೋಬರ್ 31ರೊಳಗೆ ಕೆಳಗಿನ ವಿಳಾಸಕ್ಕೆ ತಲುಪಿಸಬೇಕೆಂದು “ಮಕ್ಕಳ ಕಲಾ ಲೋಕ” ದ ಪ್ರಕಟಣೆಯಲ್ಲಿ ತಿಳಿಸಿರುವರು.

ರಮೇಶ ಎಂ. ಬಾಯಾರು, ಅಧ್ಯಕ್ಷರು. “ಮಕ್ಕಳ ಕಲಾ ಲೋಕ”- ಸ್ಕಂದ – ಅಳಕೆ ಮಜಲು – 574243. ಮೊ: 9448626093

 

You may also like

News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ
News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ

You cannot copy content of this page