August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಡಿಕ್ಕಿ ಹೊಡೆದು ಪರಾರಿಯಾದ ವಾಹನ ಪತ್ತೆ ಹಚ್ಚುವಂತೆ ಮಿತ್ತಬೈಲ್ ಜಮಾತಿನಿಂದ ಪೊಲೀಸರಿಗೆ ಮನವಿ

ಬಿ.ಸಿ. ರೋಡ್ : ಮಿತ್ತಬೈಲ್ ಜಮಾಅತ್ ವ್ಯಾಪ್ತಿಯ ಶಾಂತಿ ಅಂಗಡಿ ಬಳಿ ರಸ್ತೆ ದಾಟುತ್ತಿದ್ದ ಇಬ್ಬರು ಬಾಲಕಿಯರಿಗೆ ಡಿಕ್ಕಿ ಹೊಡೆದು ಪರಾರಿಯಾದ ವಾಹನವನ್ನು ಪತ್ತೆ ಹಚ್ಚುವಂತೆ ಮಿತ್ತಬೈಲ್ ಜಮಾಅತ್ ಕಮಿಟಿ ಅಧ್ಯಕ್ಷ ಮುಹಮ್ಮದ್ ಅದ್ದೇಡಿ ನೇತೃತ್ವದ ನಿಯೋಗ ಬಂಟ್ವಾಳ ನಗರ ಠಾಣಾಧಿಕಾರಿಯನ್ನು  ಭೇಟಿಯಾಗಿ  ಮನವಿ ಸಲ್ಲಿಸಿದರು.

ಸಪ್ಟಂಬರ್ 22ರಂದು ಬಾಲಕಿಯರು ರಸ್ತೆ ದಾಟುತ್ತಿದ್ದ ವೇಳೆ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯಿಂದ ಒಂದೇ ಮನೆಯ ಇಬ್ಬರು ಬಾಲಕಿಯರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದು ಒಂದು ತಿಂಗಳು ಕಳೆದರೂ ಡಿಕ್ಕಿಯಾದ ವಾಹನ ಇದುವರೆಗೂ ಪತ್ತೆಯಾಗಿಲ್ಲ. ಆದುದರಿಂದ ತಕ್ಷಣ ತಪ್ಪಿತಸ್ಥ ವಾಹನ ಹಾಗೂ ಚಾಲಕನನ್ನು ಪತ್ತೆ ಹಚ್ಚಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ ಹಾಗೂ ಕುಟುಂಬಸ್ಥರಿಗೆ ನ್ಯಾಯ ಒದಗಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಜಮಾತ್ ಉಪಾಧ್ಯಕ್ಷ ಜಮಾಲ್, ಪ್ರಧಾನ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ, ಕೋಶಾಧಿಕಾರಿ ಅಬ್ದುಲ್ ರಹಿಮಾನ್, ಕಾರ್ಯದರ್ಶಿ ಅಶ್ರಫ್ ಶಾಂತಿ ಅಂಗಡಿ ಉಪಸ್ಥಿತರಿದ್ದರು.

You may also like

News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ
News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ

You cannot copy content of this page