August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ ಭಾರತ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಹೊಸದಿಲ್ಲಿ: ಅಕ್ಟೋಬರ್ 29ರಂದು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರು ತನ್ನ ಸರಕಾರದ ಮುಂಚೂಣಿ ಆರೋಗ್ಯ ವಿಮೆ ಕಾರ್ಯಕ್ರಮ ಆಯುಷ್ಮಾನ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು 70 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರಿಗಾಗಿ ವಿಸ್ತರಿಸಿದರು. ಇಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 70 ವರ್ಷ ಮೇಲ್ಪಟ್ಟವರು ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಲು ‘ಆಯುಷ್ಮಾನ ವಯ ವಂದನಾ ಕಾರ್ಡ್‌’ನ್ನು ಹೊಂದಿರುವುದು ಅಗತ್ಯವಾಗಿದೆ ಎಂದು ತಿಳಿಸಿದರು.


ಆದರೆ ದಿಲ್ಲಿ ಮತ್ತು ಪಶ್ಚಿಮ ಬಂಗಾಳಗಳಲ್ಲಿಯ 70 ವರ್ಷ ಮೇಲ್ಪಟ್ಟವರು ಈ ಯೋಜನೆಯ ಲಾಭಗಳನ್ನು ಪಡೆಯಲು ಸಾಧ್ಯವಿಲ್ಲ. ಏಕೆಂದರೆ ಅವರ ಸರಕಾರಗಳು ‘ರಾಜಕೀಯ ಕಾರಣಗಳಿಂದಾಗಿ’ ಅದನ್ನು ಜಾರಿಗೊಳಿಸುತ್ತಿಲ್ಲ ಎಂದು ಮೋದಿ ಹೇಳಿದರು.

ಈ ರಾಷ್ಟ್ರೀಯ ಆರೋಗ್ಯ ವಿಮೆ ಯೋಜನೆಯು ಆಸ್ಪತ್ರೆ ವೆಚ್ಚಗಳಿಗಾಗಿ ವಾರ್ಷಿಕ 5 ಲಕ್ಷ ರೂಪಯಿಗಳ ನೆರವನ್ನು ಒದಗಿಸುತ್ತದೆ, ಆದರೆ ವಿಷಾದನೀಯವಾಗಿ ನಿಮ್ಮ ರಾಜ್ಯಗಳಲ್ಲಿ ರಾಜಕೀಯ ಹಿತಾಸಕ್ತಿಗಳು ಈ ಯೋಜನೆಯ ಅನುಷ್ಠಾನಕ್ಕೆ ಅಡ್ಡಿಯನ್ನುಂಟು ಮಾಡಿವೆ ಎಂದು ದಿಲ್ಲಿ ಮತ್ತು ಪಶ್ಚಿಮ ಬಂಗಾಳದ ಜನತೆಯನ್ನು ಪ್ರಸ್ತಾವಿಸಿ ಮೋದಿ ಹೇಳಿದರು. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿಯವರು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಸುಮಾರು 12,850 ಕೋಟಿ ರೂಪಾಯಿ ವೆಚ್ಚದ ಹಲವಾರು ಯೋಜನೆಗಳಿಗೆ ಚಾಲನೆ ನೀಡಿದರು, ಉದ್ಘಾಟಿಸಿದರು ಮತ್ತು ಶಿಲಾನ್ಯಾಸ ನೆರವೇರಿಸಿದರು.

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page