ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ಚೇತನ್ ಮುಂಡಾಡಿ

ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಚೇತನ್ ಮುಂಡಾಡಿ ಇದೀಗ ಮತ್ತೊಂದು ಚಿತ್ರದೊಂದಿಗೆ ಸಿನಿ ಪ್ರಿಯರ ಮುಂದೆ ಬಂದಿದ್ದಾರೆ. ಅದುವೇ ʼದಿಗಿಲ್ʼ (Digil)
b
ಈ ಬಾರಿ ಚೇತನ್ ಮುಂಡಾಡಿ ಅವರು ತುಳುನಾಡಿನಲ್ಲಿ ಆರಾಧಿಸುವ ಜುಮಾದಿ ಬಂಟ ದೈವದ ಕಥೆಯನ್ನು ತೆರೆಯ ಮೇಲೆ ತರುತ್ತಿದ್ದಾರೆ. ಜುಮಾದಿ ಬಂಟ ದೈವ ಮತ್ತು ಮಂಗಳಮುಖಿಯ ನಡುವಿನ ಕಥಾನಕವನ್ನು ಹೇಳಲು ಹೊರಟಿದ್ದಾರೆ.
ʼದಿಗಿಲ್ʼ ಎಂದರೆ ಭಯ ಎಂದರ್ಥ. ಈ ಬಗ್ಗೆ ಮಾತನಾಡುವ ಅವರು, “ʼದಿಗಿಲ್ʼ ಹೊಸತನದ ಕಥೆ. ಸತ್ಯ ಘಟನೆಯೊಂದರ ಕಥೆಯನ್ನು ಇಲ್ಲಿ ಹೇಳಲು ಹೊರಟಿದ್ದೇವೆ. ಇದು ಈ ಮಣ್ಣಿನ ಕಥೆ. ಆದರೆ ಹಿಂದೆಂದೂ ಕೇಳಿರದ ಕಥೆ ಇಲ್ಲಿದೆ” ಎನ್ನುತ್ತಾರೆ ಚೇತನ್ ಮುಂಡಾಡಿ.