August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾರಿಪಳ್ಳ ಕಡೆಗೋಲಿಯಲ್ಲಿ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಓರ್ವ ಸಾವು ಮತ್ತೊರ್ವ ಗಂಭೀರ

ಬಂಟ್ವಾಳ : ತಾಲೂಕಿನ ಮಾರಿಪ್ಪಳ್ಳ ಸಮೀಪದ  ಕಡೆಗೋಳಿ ಎಂಬಲ್ಲಿ ಬೈಕ್ ಗೆ ಖಾಸಗಿ‌ ಬಸ್  ಡಿಕ್ಕಿಯಾದ ಪರಿಣಾಮ  ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನವಂಬರ್ 3ರಂದು ಭಾನುವಾರ ರಾತ್ರಿ ನಡೆದಿದೆ.

    ಕಡೆಗೋಳಿ ನಿವಾಸಿ ಪ್ರವೀಣ (30) ಸ್ಥಳದಲ್ಲಿಯೇ ಮೃತಪಟ್ಟ ವ್ಯಕ್ಯಿಯಾಗಿದ್ದು, ಸ್ನೇಹಿತ ಸಂದೀಪ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಬ್ಬರು ಸೇಲ್ಸ್ ಮ್ಯಾನ್ ಕೆಲಸಗಾರರಾಗಿದ್ದು, ತನ್ನ ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸೆಲಿನ ಹೆಸರಿನ ಬಸ್ ಕಡೆಗೋಳಿಯಲ್ಲಿ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸಿದ ತಕ್ಷಣ ಸೆಲಿನ ಬಸ್ ನ‌ ಚಾಲಕ ಬಸ್ ನಿಂದ ಇಳಿದು ಪರಾರಿಯಾಗಿದ್ಧಾನೆ. ಬಸ್ ಚಾಲಕನ ಅತಿವೇಗದ ಮತ್ತು ಅಜಾಗರೂಕತೆಯ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯರ ಆಕ್ರೋಶ:  ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಸೆಲಿನಾ ಹೆಸರಿನ ಬಸ್ ಚಾಲಕರು ಅತೀ ವೇಗ ಮತ್ತು ಅಜಾಗರುಕತೆಯಿಂದ ಚಲಾಯಿಸಿಕೊಂಡು ಅಲ್ಲಲ್ಲಿ ಡಿಕ್ಕಿ ಹೊಡೆಯುತ್ತಿರುವುದು ಮಾಮೂಲಿಯಾಗಿದೆ. ಈಗಾಗಲೇ ಹಲವಾರು ಮಂದಿಯನ್ನು ಬಲಿ ಪಡೆದುಕೊಂಡಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಚಾಲಕರ ಲೈಸೆನ್ಸ್ ರದ್ದು ಪಡಿಸಬೇಕು, ಅತಿ ವೇಗದ ಚಾಲನೆಗೆ ಪ್ರೇರಣೆ ನೀಡುತ್ತಿರುವ ಬಸ್ ಮಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

 ಬಸ್ಸಿನಡಿಗೆ ದ್ವಿಚಕ್ರ ವಾಹನದೊಂದಿಗೆ ಸಿಲುಕಿದವರನ್ನು ಆಸ್ಪತ್ರೆಗೆ ಸಾಗಿಸಿದ ಸ್ಥಳೀಯರು ಚಾಲಕನ ಅಜಾಗರೂಕತೆಯ ಚಾಲನೆಗೆ ಆಕ್ರೋಶ ವ್ಯಕ್ತಪಡಿಸಿದರು

You may also like

News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ
News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ

You cannot copy content of this page