ಸಜಿಪ ಮೂಡ ಗ್ರಾಮ ಪಂಚಾಯತ್ ಇದರ ಉಪಚುನಾವಣೆಗೆ ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ಬಶೀರ್ ಬೊಳ್ಳಾಯಿ ಆಯ್ಕೆ
ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ಇಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಮತದಾನ ನಡೆಯಲಿದ್ದು, ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಇದರ ಬೆಂಬಲಿತ ಅಭ್ಯರ್ಥಿಯಾಗಿ ಬಶೀರ್ ಬೊಳ್ಳಾಯಿಯನ್ನು ಆಯ್ಕೆ ಮಾಡಲಾಯಿತು.
ನವಂಬರ್ 4ರಂದು ಕಾರಾಜೆಯಲ್ಲಿ ನಡೆದ ಅಭ್ಯರ್ಥಿ ಘೋಷಣೆ ಸಭೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಜೊತೆ ಕಾರ್ಯದರ್ಶಿ ಖಬೀರ್ ಅಕರಂಗಡಿಯವರು ಘೋಷಣೆ ಮಾಡಿದರು.