July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಮೇರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ 2ನೇ ಬಾರಿ ಅಮೇರಿಕ ಅಧ್ಯಕ್ಷ ಪಟ್ಟ ಮುಗಿಲಿಗೇರಿಸಿಕೊಂಡ  ಡೊನಾಲ್ಡ್ ಟ್ರಂಪ್

ಅಮೇರಿಕದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2ನೇ ಬಾರಿ ಅಮೇರಿಕ ಅಧ್ಯಕ್ಷರಾಗಿ  ಗೆಲುವು ಸಾಧಿಸಿದ್ದಾರೆ.  ಭಾರತೀಯ ಮೂಲದ ಕಮಲಾ ಹ್ಯಾರಿಸ್ ವಿರುದ್ದ ಟ್ರಂಪ್ ಗೆಲುವು ಸಾಧಿಸಿದ್ದಾರೆ. ಅಮೇರಿಕ (ಯುಇಎಸ್‌) ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಪ್ರಚಂಡ ಮುನ್ನಡೆ ಸಾಧಿಸಿರುವ ಬೆನ್ನಲ್ಲಿ ಇದು ಅಮೆರಿಕನ್ನರಿಗೆ ಅದ್ಭುತ ಗೆಲುವು ನಾವು ಇತಿಹಾಸ ನಿರ್ಮಿಸಿದ್ದೇವೆ ಎಂದು ಟ್ರಂಪ್ ಗೆಲುವನ್ನು ಘೋಷಿಸಿಕೊಂಡಿದ್ದಾರೆ.

ಫ್ಲೋರಿಡಾದ ಪಾಮ್ ಬೀಚ್ನಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಹಿಂದೆಂದೂ ಕಂಡಿರದ ರಾಜಕೀಯ ಗೆಲುವು. ನಾನು ಅಮೇರಿಕಾದ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಈ ಗೆಲುವು “ಅಮೆರಿಕನ್ ಜನರಿಗೆ ಭವ್ಯವಾದ ಗೆಲುವು” ಎಂದು ಕರೆದರು. ನಾವು ಇತಿಹಾಸ ನಿರ್ಮಿಸಿದ್ದೇವೆ, ಇದು ಅಮೆರಿಕಕ್ಕೆ ಸುವರ್ಣ ಯುಗ. ಈ ವರ್ಷದ ಆರಂಭದಲ್ಲಿ ಹತ್ಯೆಯ ಯತ್ನದಿಂದ ಬದುಕುಳಿದ ಟ್ರಂಪ್, “ದೇವರು ಒಂದು ಕಾರಣಕ್ಕಾಗಿ ನನ್ನ ಜೀವವನ್ನು ಉಳಿಸಿದ್ದಾನೆ” ಎಂದು ಹೇಳಿದರು.

ಡೋನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಟ್ರಂಪ್ ಜೊತೆಗಿನ ಫೋಟೋ ಹಂಚಿಕೊಂಡಿರುವ ಮೋದಿ, ಭಾರತ ಹಾಗೂ ಅಮೆರಿಕ ದ್ವಿಪಕ್ಷೀಯ ಸಂಬಂಧ, ವ್ಯಾಪಾರ ವಹಿವಾಟು ಮತ್ತಷ್ಟು ಉತ್ತಮಪಡಿಸಲು ಜಂಟಿಯಾಗಿ ಹೆಜ್ಜೆ ಹಾಕೋಣ ಎಂದಿದ್ದಾರೆ. ನನ್ನ ಸ್ನೇಹಿತ ಡೊನಾಲ್ಡ್ ಟ್ರಂಪ್ ಅವರಿಗೆ ಐತಿಹಾಸಿಕ ಚುನಾವಣಾ ಗೆಲುವಿಗೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಹಿಂದಿನ ಅವಧಿಯ ಯಶಸ್ಸನ್ನು ಮುಂದುವರೆಸುತ್ತಿದ್ದೀರಿ. ಭಾರತ-ಅಮೆರಿಕ ವ್ಯಾಪಕ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು, ನಮ್ಮ ಸಹಯೋಗವನ್ನು ನವೀಕರಿಸಲು ನಾನು ಎದುರು ನೋಡುತ್ತಿದ್ದೇನೆ. ನಮ್ಮ ಜನರ ಒಳಿತಿಗಾಗಿ ಒಟ್ಟಾಗಿ ಕೆಲಸ ಮಾಡೋಣ. ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸೋಣ ಎಂದು ಮೋದಿ ಟ್ವೀಟ್ ಮೂಲಕ ಸಂದೇಶ ರವಾನಿಸಿದ್ದಾರೆ.

ಇದು ಹಿಂದೆಂದೂ ಯಾರೂ ನೋಡದ ಚಳುವಳಿಯಾಗಿದೆ. ನಾವು ನಮ್ಮ ಗಡಿಗಳನ್ನು ನಮ್ಮ ದೇಶದ ಎಲ್ಲಾ ಸಮಸ್ಯೆಯನ್ನು ಸರಿಪಡಿಸುತ್ತೇವೆ. ನಾವು ಇತಿಹಾಸವನ್ನು ನಿರ್ಮಿಸಿದ್ದೇವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.  ಟ್ರಂಪ್ 25 ರಾಜ್ಯಗಳಲ್ಲಿ ಮತ್ತು ಕಮಲಾ ಹ್ಯಾರಿಸ್ 16 ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಡೊನಾಲ್ಡ್ ಟ್ರಂಪ್ 270 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಮಲಾ ಹ್ಯಾರಿಸ್ 214 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಗೆಲುವಿಗೆ 270 ಸ್ಥಾನಗಳಲ್ಲಿ ಟ್ರಂಪ್‌ ಮುನ್ನಡೆ ಸಾಧಿಸಿದ್ದಾರೆ.

You may also like

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.
News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ

You cannot copy content of this page