ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ
ಬಂಟ್ವಾಳ : ಶಂಬೂರಿನಲ್ಲಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನವಂಬರ್ 19ರಂದು ಜರುಗಲಿರುವ 18 ನೇ ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಹೇಮಚಂದ್ರ ಭಂಡಾರದ ಮನೆ, ಶಾಲಾ ಮುಖ್ಯೋಪಾಧ್ಯಾಯ ಜಯರಾಮ ಡಿ. ಪಡ್ರೆ, ಸಿ.ಆರ್.ಪಿ. ಸತೀಶ್ ರಾವ್, ಗ್ರಾಮ ಪಂಚಾಯತ್ ಸದಸ್ಯ ಯೋಗೀಶ, ಶಿಕ್ಷಕಿಯರಾದ ಚಿತ್ರಾ, ಇಂದಿರಾ, ದಯಾವತಿ, ಮೀನಾಕ್ಷಿ, ಮಾಲಾಶ್ರೀ, ಉಷಾ ಹಾಗೂ ತುಳಸಿ ಉಪಸ್ಥಿತರಿದ್ದರು.