September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಕ್ರಮ ಮರಳುಗಾರಿಕೆಗೆ ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ – ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ ಮಾರ್ಗದರ್ಶನದಲ್ಲಿ ದಿಢೀರ್ ದಾಳಿ

ಮಂಗಳೂರು ನವಂಬರ್ 7 : ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಲಾಯಿತು. ಇದಲ್ಲದೆ, ಅಕ್ರಮ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ.

ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಇವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಹಾಗೂ ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್ ಮತ್ತಿತರರು ಇದ್ದರು.

You may also like

News

₹29 Lakh Donation to Father Muller for Paediatric Cancer Care Through ‘Symphony of Hope’

Music, compassion and community come together to support children battling cancer In a remarkable initiative that brought together music, compassion
News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ

You cannot copy content of this page