ಉಪ್ಪಿನಂಗಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಇಲ್ಲಿ ಪ್ರಥಮ ಚಿಕಿತ್ಸೆ ಮತ್ತು ಆರೋಗ್ಯ ಶಿಕ್ಷಣದ ಕಾರ್ಯಾಗಾರ
ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿ ನವಂಬರ್ 5ರಂದು “ಆರೋಗ್ಯ ಶಿಕ್ಷಣ ಮತ್ತು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಾಗಾರ”ವನ್ನು ನಡೆಸಲಾಯಿತು.
ಇಂದ್ರಪ್ರಸ್ಥ ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಹೆಚ್.ಕೆ. ಕಾರ್ಯಕ್ರಮವನ್ನು ಉದ್ಘಾಟಿಸಿ ಭೌತಿಕ ಮತ್ತು ಮಾನಸಿಕ ಅರೋಗ್ಯದ ಮಹತ್ವದ ಕುರಿತು ಮಾತನಾಡಿದರು. ಬಳಿಕ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಡಾ. ಮೊಯಿದ್ದೀನ್ ಆಶಿಕ್ MBBS ಹಾಗೂ ಡಾ. ಮರಿಯಂ ರೆನಿಶಾ ಬಸ್ತಿಕಾರ್ MBBS ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆಯ ಬಗ್ಗೆ ಕೆಲವೊಂದು ಪ್ರಯೋಗದ ಮುಖೇನ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಇಬ್ರಾಹಿಂ ಎಂ. ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.
ರಾಜ್ಯಶಾಸ್ತ್ರ ಉಪನ್ಯಾಸಕರಾದ ರಮೇಶ್ ಹೆಚ್.ಜೆ. ಕಾರ್ಯಕ್ರಮಕ್ಕೆ ಸರ್ವರನ್ನೂ ಸ್ವಾಗತಿಸಿ, ಗಣಿತಶಾಸ್ತ್ರ ಉಪನ್ಯಾಸಕಿ ಡಾ. ಮಂಜುಳಾ ಎಸ್. ಬಣಾಕರ್ ವಂದಿಸಿದರು. ವಿದ್ಯಾರ್ಥಿನಿ ರಶ್ಮಿ ಪ್ರಾರ್ಥಿಸಿ, ಜೀವಶಾಸ್ತ್ರ ಉಪನ್ಯಾಸಕಿ ಸುಲಕ್ಷಣ ಕಾರ್ಯಕ್ರಮವನ್ನು ನಿರೂಪಿಸಿದರು.