ಬಂಟ್ವಾಳ ಪುರಸಭೆ ಉಪ ಚುನಾವಣೆ – ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪುರುಷೋತ್ತಮ ಎಸ್. ಬಂಗೇರ ನಾಮಪತ್ರ ಸಲ್ಲಿಕೆ

ಬಂಟ್ವಾಳ : ಇಲ್ಲಿನ ಪುರಸಭೆಗೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪುರುಷೋತ್ತಮ ಎಸ್. ಬಂಗೇರ ನವಂಬರ್ 8ರಂದು ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಬೂಡಾ ಅಧ್ಯಕ್ಷ ಬೇಬಿ ಕುಂದರ್, ವಲಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ರೋಡ್ರಿಗಸ್ ಹಾಗೂ ಲೋಕೇಶ್ ಕುಲಾಲ್ ಉಪಸ್ಥಿತರಿದ್ದರು.