ಪೋಕ್ಸೊ ಪ್ರಕರಣದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ಬಾಲಕಿಯ ಕುಟುಂಬಕ್ಕೆ ರೂಪಾಯಿ 5 ಲಕ್ಷ ಪರಿಹಾರ – ತೀರ್ಪು ಪ್ರಕಟ

ನ್ಯಾಯ ಒದಗಿಸಿ ಕೊಟ್ಟ ಪೊಲೀಸ್ ನಿರೀಕ್ಷಕ ಜೋನ್ಸನ್ ಡಿಸೋಜ ರವರಿಗೆ ವ್ಯಾಪಕ ಪ್ರಶಂಸೆ
ಮಂಗಳೂರು : ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿ ಎಂಬಲ್ಲಿ 4 ವರ್ಷಗಳ ಹಿಂದೆ 8 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕೊಲೆ (ಪೋಕ್ಸೊ) ಪ್ರಕರಣದ ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯದಲ್ಲಿ ತ್ವರಿತಗತಿ ವಿಚಾರಣೆ ನಡೆಸಿ 3 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ಬಾಲಕಿಯ ಕುಟುಂಬಕ್ಕೆ ರೂಪಾಯಿ 5 ಲಕ್ಷ ಪರಿಹಾರ ನೀಡುವಂತೆ ತೀರ್ಪು ಪ್ರಕಟಿಸಿದೆ.
ಪ್ರಕರಣದವನ್ನು ಬೇಧಿಸಿ ಆರೋಪಿಗಳಾದ ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿ ಎಂಬ ಆರೋಪಿಗಳಿಗೆ ಶಿಕ್ಷೆಯಾಗುವಲ್ಲಿ ಯಾವುದೇ ಪ್ರಭಾವಕ್ಕೆ ಒಳಗಾಗದೆ ದಕ್ಷತೆ ಹಾಗೂ ಕಾರ್ಯಕ್ಷಮತೆಯಿಂದ ಕೆಲಸ ನಿರ್ವಹಿಸಿ ಬಾಲಕಿಗೆ ಮತ್ತು ಅವಳ ಕುಟುಂಬಕ್ಕೆ ನ್ಯಾಯ ಒದಗಿಸಿಕೊಟ್ಟ ನಿಷ್ಠಾವಂತ ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜಾರವರು ವ್ಯಾಪಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.