March 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಲ್ಲಡ್ಕ ಶ್ರೀರಾಮ ಹಿರಿಯ ಪಾಥಮಿಕ ಶಾಲೆಯಲ್ಲಿ ಭಜನೆ ಹಾಗೂ ಅಕ್ಟೋಬರ್ ತಿಂಗಳಲ್ಲಿ ಹುಟ್ಟಿದ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಆಚರಣೆ

ಕಲ್ಲಡ್ಕ ಶ್ರೀರಾಮ ಹಿರಿಯ ಪಾಥಮಿಕ ವೇದವ್ಯಾಸ ಧ್ಯಾನಮಂದಿರದಲ್ಲಿ ಭಜನೆ ಹಾಗೂ ಅಕ್ಟೋಬರ್ ತಿಂಗಳಲ್ಲಿ ಹುಟ್ಟಿದ ಮಕ್ಕಳ ಹುಟ್ಟುಹಬ್ಬವನ್ನು ಸಾಮೂಹಿಕವಾಗಿ ಆಚರಿಸಲಾಯಿತು.

ಶ್ರೀರಾಮ ಪದವಿ ಮಹಾವಿದ್ಯಾಲಯದ ಕನ್ನಡ ಪ್ರಧ್ಯಾಪಕರಾದ ರಶ್ಮಿತಾ ಮಾತನಾಡಿ, “ನಾವು ಪಾಶ್ಚಿಮಾತ್ಯ ಸಂಸ್ಕೃತಿಗೆ ರೂಢಿಯಾಗಿದ್ದೇವೆ. ಅದನ್ನು ಬಿಟ್ಟು ನಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುವ. ಸಾಮೂಹಿಕ ಆಚರಣೆ ಹಾಗೂ ಸಹಭೋಜನೆ ಇವುಗಳಿಂದ ಧನಾತ್ಮಕ ಪರಿಣಾಮ ಉಂಟಾಗುತ್ತದೆ. ಇಂದು ನೀವು ಭಾರತ ಮಾತೆಗೆ ಸಮರ್ಪಿಸಿದ ನಿಧಿಸಂಗ್ರಹವು ಅಶಕ್ತರಿಗೆ ಸಲ್ಲುತ್ತದೆ. ಇದೇ ರೀತಿ ನಮ್ಮ ಕೈಲಾದ ಸಹಾಯವನ್ನು ನಾವು ಅಶಕ್ತರಿಗೆ ನೀಡಿದಾಗ ನಮ್ಮ ಹುಟ್ಟುಹಬ್ಬ ಸಾರ್ಥಕವಾಗುತ್ತದೆ.

ಅದೇ ರೀತಿ ಭಜನೆಯಿಂದ ನಮ್ಮ ಸಂಸ್ಕೃತಿ, ಆಚಾರವಿಚಾರಗಳನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ. ತಾಯಿ ಹೇಳಿದ ಜೀವನ ಮೌಲ್ಯ ಹಾಗೂ ಶಿಕ್ಷಕರು ಹೇಳಿದ ಪಾಠ ಜೀವನದಲ್ಲಿ ಅಳವಡಿಸಿಕೊಳ್ಳಿ, ನಿಮ್ಮ ಜೀವನವು ಉತ್ತುಂಗಕ್ಕೆ ಹೋಗಲಿಎಂದು ಹಾರೈಸಿದರು. ನಂತರ 7ನೇ ತರಗತಿಯ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ಅಧ್ಯಾಪಕ ವೃಂದದವರು ಹುಟ್ಟುಹಬ್ಬ ಆಚರಿಸಿಕೊಳ್ಳುವ ಮಕ್ಕಳಿಗೆ ಆರತಿ ಬೆಳಗಿ, ಅಕ್ಷತೆ ಹಾಕಿ, ತಿಲಕಧಾರಣೆ ಮಾಡಿ, ಸಿಹಿ ನೀಡಿದರು. ವಿದ್ಯಾರ್ಥಿಗಳು ಭಾರತಮಾತೆಗೆ ಪುಷ್ಪಾರ್ಚನೆ ಮಾಡಿ, ನಿಧಿ ಸಮರ್ಪಿಸಿದರು. ವೇದಿಕೆಯಲ್ಲಿ ಹಿರಿಯ ಅಧ್ಯಾಪಕರಾದ ಅನ್ನಪೂರ್ಣ ಎನ್. ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಭವಿಷ್ ನಿರೂಪಿಸಿ, ಮಾನ್ಯ ಸ್ವಾಗತಿಸಿ, ತನ್ಮಯಿ ರೈ ವಂದಿಸಿದರು.

You may also like

News

ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಡಿಎಚ್ಎಸ್ ಒತ್ತಾಯ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬವನು ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ
News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು. ದಕ್ಷಿಣ ಕನ್ನಡ

You cannot copy content of this page