E-KYC ಮಾಡದಿದ್ದರೆ ರೇಷನ್ ಕಾರ್ಡ್ ರದ್ದು!
ರಾಜ್ಯ ಅಥವಾ ಕೇಂದ್ರ ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ದಾಖಲೆಗಳು ಮುಖ್ಯ. ಜೊತೆಗೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ರೇಷನ್ ಕಾರ್ಡ್ ಮುಖ್ಯವಾಗಿದೆ. ಈ ರೇಷನ್ ಕಾರ್ಡ್ ಅಪ್ಡೇಟ್ ಕುರಿತು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.
ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. ಹೀಗಾಗಿ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರು ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಹೆಸರು ಮರು ನೋಂದಾವಣೆ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇ-ಕೆವೈಸಿ ಮಾಡಿಸಲು ಯಾವುದೆಲ್ಲಾ ದಾಖಲೆಗಳು ಕಡ್ಡಾಯವಾಗಿ ಬೇಕು ಎಂಬುದರ ಕುರಿತು ಮಾಹಿತಿ ಇಲ್ಲಿದೆ:
* ಪಡಿತರ ಚೀಟಿಯ ಮೂಲ ಪ್ರತಿ
* ಕುಟುಂಬದ ಯಜಮಾನ ಹಾಗೂ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
* ಬ್ಯಾಂಕ್ ಪಾಸ್ ಬುಕ್
* ಕುಟುಂಬದ ಯಜಮಾನನ ಎರಡು ಪಾಸ್ ಪೋರ್ಟ್ ಸೈಜ್ ಪೋಟೋ