July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಡೋನ್ ಬೊಸ್ಕೊ ಸಭಾಂಗಣದ ದೀರ್ಘಕಾಲದ ವ್ಯವಸ್ಥಾಪಕ ಬೊನಿಫಾಸ್ ಪಿಂಟೊ ನಿಧನ

ಖ್ಯಾತ ಸಾಂಸ್ಕೃತಿಕ ಸಂಘಟಕ ಮತ್ತು ಕೊಂಕಣಿ ನಾಟಕ ಸಭಾ ಸಂಸ್ಥೆ ಹಾಗೂ ಮಂಗಳೂರಿನ ಹೆಸರಾಂತ ಡೋನ್ ಬೊಸ್ಕೊ ಸಭಾಂಗಣದ ದೀರ್ಘಕಾಲದ ವ್ಯವಸ್ಥಾಪಕ 62 ವರ್ಷ ಪ್ರಾಯದ ಬೊನಿಫಾಸ್ ಪಿಂಟೊ ಅವರು ಅಲ್ಪಾವಧಿಯ ಆರೋಗ್ಯ ಸಮಸ್ಯೆಯಿಂದ ಇಂದು ನವಂಬರ್ 10ರಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.

ಬೊನಿಫಾಸ್ ಪಿಂಟೊ ಇವರು ತಮ್ಮ ವೃತ್ತಿ ಜೀವನದ ಅವಧಿಯಲ್ಲಿ 28 ವರ್ಷಗಳ ಕಾಲ ಕೆಎನ್‌ಎಸ್‌ಗೆ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ತಮ್ಮ ಸಂಘಟನಾ ಚಾತುರ್ಯತೆ, ಸಮಯಪ್ರಜ್ಞೆ ಮತ್ತು ಸರಳ ಸ್ವಭಾವದಿಂದಾಗಿ ಜನರ ಮನ್ನಣೆಗಳಿಸಿದ್ದರು. ಸ್ಪರ್ಧೆಗಳ ಆಯೋಜನೆ, ರಂಗಭೂಮಿ ವಿನ್ಯಾಸ ಮತ್ತು ರಂಗಭೂಮಿಯ ವಸ್ತ್ರವಿನ್ಯಾಸ ಹಾಗೂ ನಿರ್ವಹಣೆಯಲ್ಲಿ ವಿಶೇಷ ಪರಿಣತಿ ಹೊಂದಿದವರಾಗಿದ್ದರು. ಬೊನಿಫಾಸ್ ಪಿಂಟೊ ಇವರು ರೀಟಾ ಪಿಂಟೊ ಮತ್ತು ದಿವಂಗತ ಸಿಪ್ರಿಯನ್ ಪಿಂಟೊ ಇವರ ಪುತ್ರರಾಗಿದ್ದು, ಜಿನ್ನಾ, ಲೋನಾ, ಡಯಾನಾ ಮತ್ತು ಆಶಾ ಎಂಬ ಸಹೋದರಿಯರನ್ನು ಅಗಲಿದ್ದಾರೆ.

ಬೊನಿಫಾಸ್ ಪಿಂಟೊ ಇವರ ಪಾರ್ಥಿವ ಶರೀರವನ್ನು ನಾಳೆ ನವಂಬರ್ 11ರಂದು ಡೋನ್ ಬೊಸ್ಕೊ ಹಾಲ್‌ನಲ್ಲಿ ಮಧ್ಯಾಹ್ನ 2.15 ಕ್ಕೆ ಮತ್ತು ಜೆಪ್ಪು ಚರ್ಚ್ ನಲ್ಲಿ 3.30ಕ್ಕೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

You may also like

News

Father Muller Ushers in a New Era of Precision Orthopaedics with the Region’s First STRYKER–USA MAKO SmartRobotics™ System

Father Muller Medical College Hospital has once again reaffirmed its commitment to pioneering excellence in healthcare with the commissioning of
News

41 ಬಾರಿ ವಾರೆಂಟ್ ಜಾರಿಯಾಗಿದ್ದ ಖತರ್ನಾಕ್ ಆರೋಪಿ ನೆಲ್ಸನ್ ಕೊನೆಗೂ ಪುತ್ತೂರು ಪೊಲೀಸರ ವಶಕ್ಕೆ!

ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ಬರೋಬ್ಬರಿ 41 ಬಾರಿ ದಸ್ತಗಿರಿ ವಾರೆಂಟ್ ಆದೇಶವಾಗಿದ್ದ ದರೋಡೆ ಪ್ರಕರಣದ ಪ್ರಮುಖ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಕೇರಳದಲ್ಲಿ

You cannot copy content of this page