April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ತಹಶೀಲ್ದಾರ್ ಭೇಟಿ – ಜನಸಾಮಾನ್ಯರ ಕೆಲಸಕಾರ್ಯಗಳು ಸುಗಮವಾಗಿ ನಡೆಯುವಂತೆ ಒತ್ತಾಯ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ   ಪಿ.ಸಿ. ಜಯರಾಂ ನೇತ್ರತ್ವದಲ್ಲಿ ಇಂದು ನವಂಬರ್ 11ರಂದು ಸುಳ್ಯ ತಹಶೀಲ್ದಾರ್ ರವರನ್ನು ಭೇಟಿ ಮಾಡಿ ಹಲವಾರು ಪ್ರಗತಿಪರ ವಿಚಾರಗಳನ್ನು ಚರ್ಚಿಸಲಾಯಿತು. ಮುಖ್ಯವಾಗಿ ಅಕ್ರಮ-ಸಕ್ರಮ, 94C, 94CCಯಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ, ವಿದ್ಯಾಭ್ಯಾಸ ನಿಮಿತ್ತ ಆದಾಯ-ಜಾತಿ ದೃಢೀಕರಣ ಪ್ರಮಾಣ ಪತ್ರಗಳು ಸುಲಲಿತವಾಗಿ ದೊರಕುವಂತೆ ಮತ್ತು ಇನ್ನಿತರ ಕಛೇರಿ ಕಾರ್ಯಗಳಲ್ಲಿ ಮೊದಲಿದ್ದಂತೆಯೇ ನಡೆದು ಬಂದ ಮಧ್ಯವರ್ತಿಗಳ ಹಾವಳಿ ತಡೆಯುವಂತೆ, ಅಕ್ರಮ-ಸಕ್ರಮ ಸಮಿತಿಯ ಸಭೆಯನ್ನು ಪ್ರತೀ ತಿಂಗಳು ನಡೆಸುವಂತೆ ಮತ್ತು ಜನಸಾಮಾನ್ಯರ ಕೆಲಸಗಳನ್ನು ಸತಾಯಿಸದೇ ಶೀಘ್ರವಾಗಿ ವಿಲೇವಾರಿ ನಡೆಸುವಂತೆ ಸಿಬ್ಬಂದಿಗಳಿಗೆ ಸೂಚಿಸಲು ಕಾಂಗ್ರೆಸ್ ನಿಯೋಗದಿಂದ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್. ಜಯಪ್ರಕಾಶ್ ರೈ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರು, ಕಲ್ಮಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ, ಅಕ್ರಮ ಸಕ್ರಮ ಸಮಿತಿ ಸದಸ್ಯ ಗೀತಾ ಕೋಲ್ಚಾರು, ಪೆರುವಾಜೆ ಗ್ರಾಮ ಪಂಚಾಯಿತಿ ಸದಸ್ಯ ಸಚಿನ್ ರಾಜ್ ಶೆಟ್ಟಿ, ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುರೇಶ್ ಅಮೈ, ಬೆಳ್ಳಾರೆ ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ರೈ ಬೆಳ್ಳಾರೆ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಕೊಯ್ಕುಳಿ, ಜಿಲ್ಲಾ ಕೆ.ಡಿ.ಪಿ. ಸದಸ್ಯರಾದ ಶ್ರೀಮತಿ ಸುಜಯಕೃಷ್ಣ, ಪ್ರವೀಣಾ ರೈ ಮರುವಂಜ, ಅಜ್ಜಾವರ ಗ್ರಾಮ ಪಂಚಾಯಿತಿ ಸದಸ್ಯೆ ಲೀಲಾ ಮನಮೋಹನ್, ಆಲೆಟ್ಟಿ ಗ್ರಾಮ ಪಂಚಾಯಿತಿ ಸದಸ್ಯ ಧರ್ಮಪಾಲ ಕೊಯಿಂಗಾಜೆ, ಪಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಧರ್ಮಣ್ಣ ನಾಯ್ಕ್ ಗರೋಡಿ, ಮಹೇಶ್ ಬೆಳ್ಳಾರ್ಕರ್, ಕೇಶವ್ ಮೊರಂಗಲ್ಲು, ರವಿಕುಮಾರ್ ಕಿರಿಭಾಗ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ರಾಜು ನೆಲ್ಲಿಕುಮೇರಿ, ವಿಶ್ವನಾಥ, ಚೇತನ್ ಕಜೆಗದ್ದೆ ಮತ್ತಿತರರು ಉಪಸ್ಥಿತರಿದ್ದರು.

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page