March 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಂಗಳೂರು – ಮಂಗಳೂರು ಎಕ್ಸ್‌ಪ್ರೆಸ್ ವೇ ಕೇಂದ್ರ ಸರ್ಕಾರ ಸಿದ್ದತೆ: 9 ಕಂಪನಿಗಳಿಂದ ಟೆಂಡರ್ ಸಲ್ಲಿಕೆ

ಕೇಂದ್ರ ಸರ್ಕಾರ ಬೆಂಗಳೂರು – ಮಂಗಳೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ಡಿಪಿಆರ್ ತಯಾರಿಸಲು ಟೆಂಡರ್‌ ಆಹ್ವಾನಿಸಿದೆ. ಇದರಿಂದ ಬೆಂಗಳೂರು – ಮಂಗಳೂರು ನಡುವಿನ ಪ್ರಯಾಣ ಸಮಯ ಗಣನೀಯವಾಗಿ ಕಡಿಮೆಯಾಗಲಿದೆ. ಈ ಹಿನ್ನೆಲೆಯಲ್ಲಿ ಡಿಪಿಆರ್ ತಯಾರಿಸಲು ಟೆಂಡರ್ ಕರೆಯಲಾಗಿತ್ತು. ಒಂಬತ್ತು ಕಂಪನಿಗಳು ಟೆಂಡರ್​ನಲ್ಲಿ ಭಾಗಿಯಾಗಿವೆ. ಜನವರಿ ವೇಳೆಗೆ ಟೆಂಡರ್ ಫೈನಲ್ ಆಗುವ ಸಾಧ್ಯತೆಗಳಿವೆ. ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇ ರೀತಿಯಲ್ಲಿ ಬೆಂಗಳೂರು ಮಂಗಳೂರು ಎಕ್ಸ್ ಪ್ರೆಸ್ ವೇ ಮಾಡಲು ಕೇಂದ್ರ ಸರ್ಕಾರ ಈಗಾಗಲೇ ಸಿದ್ದತೆ ಮಾಡಿಕೊಂಡಿದ್ದು, ಯೋಜನೆ ಕಾರ್ಯರೂಪಕ್ಕಾಗಿ ಡಿಪಿಆರ್ ಸಿದ್ದಪಡಿಸಲು ಟೆಂಡರ್ ಕರೆಯಲಾಗಿದೆ.

ಸಮಯ ಉಳಿತಾಯ

ಬೆಂಗಳೂರು – ಮಂಗಳೂರು ಹೋಗಬೇಕು ಅಂದರೆ ಸುಮಾರು 350 ಕಿಮೀ, ಕನಿಷ್ಟ ಆರರಿಂದ ಏಳು ಗಂಟೆಗಳ ಕಾಲ ಬೇಕಾಗುತ್ತದೆ. ಆದರೆ ಈ ಸಮಯವನ್ನು ಕಡಿಮೆ ಮಾಡಲು ಈಗಾಗಲೇ ಕೇಂದ್ರ ಸರ್ಕಾರ ಬೆಂಗಳೂರು – ಮಂಗಳೂರು ಎಕ್ಸ್ ಪ್ರೆಸ್ ವೇ ಕಾರಿಡಾರ್ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಇದರಿಂದ ಮೂರೂವರೆ ಗಂಟೆಯಿಂದ ನಾಲ್ಕು ಗಂಟೆಯೊಳಗೆ ಬೆಂಗಳೂರಿನಿಂದ-ಮಂಗಳೂರು ತಲುಪಬಹುದು ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿಪಿಆರ್ ತಯಾರಿಸಲು ಟೆಂಡರ್ ಕರೆಯಲಾಗಿತ್ತು. ಒಂಬತ್ತು ಕಂಪನಿಗಳು ಟೆಂಡರ್​ನಲ್ಲಿ ಭಾಗಿಯಾಗಿವೆ. ಜನವರಿ ವೇಳೆಗೆ ಟೆಂಡರ್ ಫೈನಲ್ ಆಗುವ ಸಾಧ್ಯತೆಗಳಿವೆ. ಇದರಿಂದ ಬೆಂಗಳೂರಿನಿಂದ ವಿದೇಶಕ್ಕೆ ಸಾಗಿಸುವ ಸಾಮಾಗ್ರಿಗಳನ್ನು ಸಾಗಿಸಲು ಸಹಾಯ ಆಗುತ್ತದೆ ಮತ್ತು ವಿದೇಶದಿಂದ ಭಾರತಕ್ಕೆ ಬರುವ ಇಂಧನ, ಗ್ಯಾಸ್, ಮೈನ್ಸ್ ಮಂಗಳೂರು ಬಂದರಿನ ಮೂಲಕ ಬೆಂಗಳೂರಿಗೆ ತರಲು ಸಹಾಯ ಆಗುತ್ತದೆ ಎಂದು ಟ್ರಾಫಿಕ್ ಎಕ್ಸ್ಪರ್ಟ್ ಚಂದ್ರಶೇಖರ್ ಅವರು ಹೇಳಿದ್ದಾರೆ.

ಒಂಬತ್ತು ಕಂಪನಿಗಳು ಟೆಂಡರ್ ಸಲ್ಲಿಕೆ

ಇನ್ನೂ ಡಿಪಿಆರ್ ರೆಡಿ ಮಾಡಲು ಒಂಬತ್ತು ಕಂಪನಿಗಳು ಟೆಂಡರ್ ಸಲ್ಲಿಸಿವೆ. ಈ ಹೈ ಸ್ಪೀಡ್ ಕಾರಿಡಾರ್ ಬೆಂಗಳೂರಿನಿಂದ ಹಾಸನ ಮಾರ್ಗವಾಗಿ ಮಂಗಳೂರು ತಲುಪಲಿವೆ. ನಾಲ್ಕು ಅಥವಾ ಆರು ಲೈನ್ ರೋಡ್ ಮಾಡಲು ಪ್ಲಾನ್ ಮಾಡಲಾಗ್ತಿದೆ. ಈ ಎಕ್ಸ್‌ಪ್ರೆಸ್ ವೇ 335 ಕಿಮೀ ವಿಸ್ತೀರ್ಣ ಇರಲಿದೆ. ಟೆಂಡರ್ ಪಡೆದುಕೊಳ್ಳುವ ಕಂಪನಿಗೆ ಡಿಪಿಆರ್ ವರದಿ ಸಲ್ಲಿಸಲು 540 ದಿನಗಳ ಕಾಲ ಅವಕಾಶ ನೀಡಲಾಗುತ್ತದೆ.

2028ರಲ್ಲಿ ಈ ಹೈ ಸ್ಪೀಡ್ ಕಾರಿಡಾರ್ ಯೋಜನೆಯ ಕೆಲಸ ಆರಂಭವಾಗಲಿದೆ ಅಂತ ಹೇಳಲಾಗುತ್ತಿದೆ. ಇದು ಅಷ್ಟು ಸುಲಭದ ಕೆಲಸವಲ್ಲ, ಕಾರಣ ಈ ಎಕ್ಸ್‌ಪ್ರೆಸ್ ವೇ ಮಾಡಲು ಸಾವಿರಾರು ಮರಗಳನ್ನು ಕಡಿಯಬೇಕಾಗುತ್ತದೆ. ಅದಕ್ಕೆ ಪರಿಸರವಾದಿಗಳು ಆಕ್ರೋಶ ವ್ಯಕ್ತಪಡಿಸಬಹುದು. ಆದರೆ ಇದರಿಂದ ನಮ್ಮ ಖಾಸಗಿ ಬಸ್ ಗಳ ನಿರ್ವಹಣೆ ಮತ್ತು ಡಿಸೇಲ್ ಉಳಿತಾಯ ಆಗಲಿದೆ ಎಂದು ಖಾಸಗಿ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮ ಹೇಳಿದ್ದಾರೆ. ಒಟ್ಟಿನಲ್ಲಿ ಬೆಂಗಳೂರು – ಮಂಗಳೂರು ಎಕ್ಸ್‌ಪ್ರೆಸ್ ವೇ ಕಾರಿಡಾರ್ ಓಪನ್ ಆದ್ರೆ, ಜನರಿಗೆ ದೊಡ್ಡ ಮಟ್ಟದಲ್ಲಿ ಸಹಾಯ ಆಗುತ್ತದೆ. ಪ್ರವಾಸೋದ್ಯಮವು ಬೆಳೆಯುತ್ತದೆ ಆದರೆ ಪರಿಸರವಾದಿಗಳು ಸುಮ್ಮನೆ ಇರ್ತಾರ ಅನ್ನೋದೆ ಯಕ್ಷ ಪ್ರಶ್ನೆ ಆಗಿದೆ.

You may also like

News

ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಡಿಎಚ್ಎಸ್ ಒತ್ತಾಯ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬವನು ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ
News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು. ದಕ್ಷಿಣ ಕನ್ನಡ

You cannot copy content of this page