January 20, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಜ್ಯದಲ್ಲಿ ಸುಳ್ಳು ದಾಖಲೆ ಸೃಷ್ಠಿಸಿ ಮಾಡಿಸಿಕೊಂಡಿದ್ದ 22 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ರದ್ದು..!

ರಾಜ್ಯದಲ್ಲಿ ಲಕ್ಷಾಂತರ ಜನ ಬಿಪಿಎಲ್ ಕಾರ್ಡ್ ದಾರರು ಹಾಗೂ ಅಂತ್ಯೋದಯ ಕಾರ್ಡ್ ದಾರರಿದ್ದು ಅವರಲ್ಲಿ 22 ಲಕ್ಷ ಕಾರ್ಡ್ಗಳನ್ನು ರದ್ದು ಮಾಡಲಾಗುತ್ತಿದೆ. ಅಥವಾ ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಮಾಡಿಸಿಕೊಂಡಿರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಿದೆ. ಅದರಲ್ಲಿ ಬ್ಯಾಂಕ್ ಸಾಲ, ವಾರ್ಷಿಕ ವರಮಾನ ಎನ್ನುವುದನ್ನು ಪರಿಶೀಲನೆ ಮಾಡಿ ಪಟ್ಟಿ ಮಾಡಿಕೊಳ್ಳಲಾಗಿದೆ.

ಕರ್ನಾಟಕದಲ್ಲಿ ಕೆಲವರು ಸುಳ್ಳು ಮಾಹಿತಿಗಳನ್ನು ನೀಡಿ ಹಾಗೂ ಶ್ರೀಮಂತರಾಗಿದ್ದರೂ ಸುಳ್ಳು ದಾಖಲೆಗಳನ್ನು ನೀಡಿ ಜನ ಬಿಪಿಎಲ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದಾರೆ. ಇಂತಹ ಹಲವರನ್ನು ಪತ್ತೆ ಮಾಡಲಾಗಿದೆ. ಆದರೆ, ಕೆಲವರು ಸರ್ಕಾರದ ನಿಯಮಗಳನ್ನು ತಿಳಿದುಕೊಳ್ಳದೆ ಬಿಪಿಎಲ್, ಅಂತ್ಯೋದಯ ಕಾರ್ಡ್ ಗಳನ್ನು ಮಾಡಿಸಿಕೊಂಡಿದ್ದಾರೆ. ಈಗ ಇಂತಹವರ ಕಾರ್ಡ್ ಗಳನ್ನೂ ರದ್ದು ಮಾಡಲಾಗುತ್ತಿದೆ.

ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಕುಟುಂಬ ತಂತ್ರಾಂಶದ (ಸಾಫ್ಟ್ವೇರ್) ಸಹಾಯದಿಂದ 22 ಲಕ್ಷಕ್ಕೂ ಹೆಚ್ಚು (22,62,412) ಬಿಪಿಎಲ್ ಹಾಗೂ ಅಂತ್ಯೋದಯ ಅನರ್ಹ ಕಾರ್ಡ್ ಗಳನ್ನು ಪತ್ತೆ ಮಾಡಿದೆ. ಇದೀಗ ಇಷ್ಟು ಜನರ ಕಾರ್ಡ್ ರದ್ದಾಗುವುದು ಖಚಿತವಾಗಿದೆ. ಇ – ಆಡಳಿತ ನೆರವು ರಾಜ್ಯದಲ್ಲಿ ನಿಯಮ ಉಲ್ಲಂಘನೆ ಮಾಡಿ ಬಿಪಿಎಲ್ ಕಾರ್ಡ್ ಹಾಗೂ ಅಂತ್ಯೋದಯ ಕಾರ್ಡ್ ಮಾಡಿಸಿಕೊಂಡಿರುವವರನ್ನು ಪತ್ತೆ ಮಾಡುವುದಕ್ಕೆ ಮಾಸ್ಟರ್ ಪ್ಲಾನ್ ಮಾಡಲಾಗಿತ್ತು. ರಾಜ್ಯ ಆಹಾರ ಇಲಾಖೆಯು ಈ ರೀತಿ ನಿಯಮ ಮೀರಿ ಪಡಿತರ ಚೀಟಿ (ರೇಷನ್ ಕಾರ್ಡ್) ಪತ್ತೆಗಾಗಿ ಇ – ಆಡಳಿತಕ್ಕೆ ಮನವಿ ಮಾಡಿತ್ತು. ಇ – ಆಡಳಿತದಿಂದ ಪರಿಶೀಲನೆ ಮಾಡಿದಾಗ 10,54,367ಕ್ಕೂ ಹೆಚ್ಚು ಕಾರ್ಡ್ ದಾರರು 1.2 ಲಕ್ಷಕ್ಕಿಂತ ಹೆಚ್ಚು ಆದಾಯ ಪಡೆಯುತ್ತಿದ್ದಾರೆ ಎನ್ನುವುದು ಬೆಳಕಿಗೆ ಬಂದಿದೆ. ಈ ಎಲ್ಲಾ ಕಾರ್ಡ್ ಗಳು ಸರ್ಕಾರದ ನಿಯಮವನ್ನು ಉಲ್ಲಂಘನೆ ಮಾಡಿವೆ ಎನ್ನುವುದು ಸ್ಪಷ್ಟವಾಗಿದೆ.

You may also like

News

ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಎಸ್. ನಂಜುಂಡಯ್ಯ ಚಾಮರಾಜನಗರ ಆಯ್ಕೆ

ಕಾಸರಗೋಡು : ಸಂಘಟಕ, ಸಾಹಿತಿ ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮೊದಲಾಗಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಎಸ್.
News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ

You cannot copy content of this page