May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಿಲಿಕುಳ ಕಂಬಳ ಮುಂದೂಡಿಕೆ

ಮಂಗಳೂರು ನವಂಬರ್ 13 :- ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವವನ್ನು ಮುಂದೂಡಲಾಗಿದೆ.

ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಘೋಷಿಸಿದ್ದು, ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 16ರಿಂದ 26ರವರೆಗೆ ಜಾರಿಯಲ್ಲಿರುತ್ತದೆ. ಅದರಂತೆ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನವೆಂಬರ್ 17 ಮತ್ತು 18 ರಂದು ಆಯೋಜಿಸಲು ಉದ್ದೇಶಿಸಲಾಗಿದ್ದ ಪಿಲಿಕುಳ ಕಂಬಳವನ್ನು ಮುಂದೂಡಲಾಗಿರುತ್ತದೆ. ಪಿಲಿಕುಳ ಕಂಬಳ ಆಯೋಜನೆಯ ಮುಂದೂಡಲಾದ ದಿನಾಂಕವನ್ನು ನಂತರದ ದಿನಗಳಲ್ಲಿ ತಿಳಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಕ ಪ್ರದೀಪ್ ಡಿಸೋಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page