April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತಾಯಿ-ಮಗುವಿನ ಆರೋಗ್ಯ ರಕ್ಷಣೆಗೆ ಮೊಬೈಲ್ ಕರೆ ಸಂದೇಶ

ಮಂಗಳೂರು ನವಂಬರ್ 13:  ಕೇಂದ್ರ ಸರ್ಕಾರವು 4 ತಿಂಗಳು ಮೇಲ್ಪಟ್ಟ ಗರ್ಭಿಣಿ ಮಹಿಳೆಯ ಹಾಗೂ ಒಂದು ವರ್ಷದೊಳಗಿನ ಮಕ್ಕಳಿಗೆ ಕುಟುಂಬದ ಸದಸ್ಯರು ವಹಿಸಬೇಕಾದ ಕಾಳಜಿ, ಲಸಿಕೆ ಒದಗಿಸುವಿಕೆ ಹಾಗೂ ಇತರೆ ತಪಾಸಣೆ ಕೈಗೊಳ್ಳಲು ಸಹಾಯಕವಾಗುವ ದಿಶೆಯಲ್ಲಿ ದೇಶಾದ್ಯಂತ ಎಲ್ಲಾ ಭಾಷೆಗಳಲ್ಲಿ ವಿನೂತನ ಕಾರ್ಯಕ್ರಮ “ಕಿಲ್ಕಾರಿ” ಮೊಬೈಲ್ ಕರೆ ಆರಂಭಿಸಲಾಗಿದೆ ಎಂದು ರಾಜ್ಯ ಕಿಲ್ಕಾರಿ ಸಂಯೋಜಕಿ ಡಾ|| ಅಶ್ವಿನಿ ತಿಳಿಸಿದ್ದಾರೆ. ಕಿಲ್ಕಾರಿಯು ಗರ್ಭಿಣಿಯರು, ತಾಯಂದಿರು ಮತ್ತು ಅವರ ಕುಟುಂಬಗಳಿಗೆ ಸಂತಾನೋತ್ಪತ್ತಿ, ನವಜಾತ ಶಿಶುಗಳು ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಸಕಾಲಿಕ, ನಿಖರವಾದ ಮತ್ತು ಸಂಬಂಧಿತ ಮಾಹಿತಿಯನ್ನು ಒದಗಿಸುವ ಮೊಬೈಲ್ ಆರೋಗ್ಯ ಶಿಕ್ಷಣ ಸೇವೆಯಾಗಿದೆ.


ಈ ಕಾರ್ಯಕ್ರಮವನ್ನು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ (MoHFW) ಸಹಭಾಗಿತ್ವದಲ್ಲಿ ಕಾರ್ಯಗತಗೊಳಿಸಲಾಗಿದೆ, ಕುಟುಂಬಗಳ ಆರೋಗ್ಯ ಜ್ಞಾನವನ್ನು ಸುಧಾರಿಸಲು ಮತ್ತು ಜೀವ ಉಳಿಸುವ, ಆರೋಗ್ಯಕರ ಅಭ್ಯಾಸಗಳನ್ನು ತಿಳಿಸುವ ಗುರಿಯನ್ನು ಹೊಂದಿದೆ. ತಾಯಿ ಮಕ್ಕಳ ಆರೋಗ್ಯ ಕಾರ್ಯಕ್ರಮದಡಿಯಲ್ಲಿ RCH ಪೋರ್ಟರ್ ನಲ್ಲಿ ದಾಖಲಾಗಿರುವ ಗರ್ಭಿಣಿಯರಿಗೆ ಕುಟುಂಬಗಳ ಮೊಬೈಲ್ ಫೋನ್ ಗಳಿಗೆ ನೇರವಾಗಿ ಸಮಯ-ಸೂಕ್ಷ್ಮ ಆಡಿಯೊ ಮಾಹಿತಿಯನ್ನು ತಲುಪಿಸಲು ಕಿಲ್ಕಾರಿ ಪ್ರಸ್ತುತ ಇಂಟರಾಕ್ಟಿವ್ ವಾಯ್ಸ್ ರೆಸ್ಪಾನ್ಸ್ (IVR) ತಂತ್ರಜ್ಞಾನವನ್ನು ಬಳಸಲಾಗಿದೆ. ಗರ್ಭಧಾರಣೆಯಾದ ಎರಡನೇ ತ್ರೈಮಾಸಿಕದಿಂದ ಮಗುವಿಗೆ ಒಂದು ವರ್ಷದವರೆಗೆ (72 ವಾರಗಳು) ತಾಯಿ ಮತ್ತು ಮಗುವಿನ ಸಾವುಗಳು ಸಂಭವಿಸುವುದನ್ನು ತಪ್ಪಿಸಲು ನಿರ್ಣಾಯಕ ಅವಧಿಯನ್ನು ಕರೆಗಳು ಒಳಗೊಳ್ಳುತ್ತವೆ.


ಕಿಲ್ಕಾರಿ ಕಾರ್ಯಕ್ರಮದಡಿ ಆರ್.ಸಿ. ಹೆಚ್ ಪೋರ್ಟಲ್‍ನಲ್ಲಿ ನೋಂದಾಯಿಸಿದ ಗರ್ಭಿಣಿ ಅಥವಾ ಕುಟುಂಬದ ಸದಸ್ಯರ ಮೊಬೈಲ್ ಸಂಖ್ಯೆಗೆ ಪ್ರತಿವಾರ ಕರೆ ಮಾಡುವ ಮೂಲಕ ಕಾಳಜಿ ವಹಿಸಲಾಗುವುದು.  ಮೊಬೈಲ್ ಸಂಖ್ಯೆ 0124-4451600 ರ ಮೂಲಕ ಸಂಪರ್ಕಿಸಿ ಪಾಲಕರೊಂದಿಗೆ ಮಾತನಾಡಲಾಗುವುದು. ಕುಟುಂಬದ ಸದಸ್ಯರು ತಾಯಿ ಮಗುವಿನ ಸುಸ್ಥಿರ ಆರೋಗ್ಯಕ್ಕಾಗಿ ಸಹಕರಿಸಬೇಕು. ಒಂದು ವೇಳೆ ಕರೆ ಸ್ವೀಕರಿಸಲು ಅಸಾಧ್ಯವಾದಲ್ಲಿ ಪುನಃ ಆರೋಗ್ಯ ಮಾಹಿತಿ ಪಡೆಯಲು Inbox number 14423 ಗೆ ಕರೆ ಮಾಡಬಹುದು.


ಗರ್ಭಿಣಿ ಎಂದು ತಿಳಿದ ದಿನದಿಂದಲೇ ಆರೋಗ್ಯ ಇಲಾಖೆ ಮೂಲಕ ತಾಯಿ ಕಾರ್ಡ್ ವಿತರಣೆ, ಟಿಡಿ ಚುಚ್ಚುಮದ್ದು ನೀಡುವಿಕೆ, ರಕ್ತ ಹೀನತ ತಡೆಗೆ ಕನಿಷ್ಠ 180 ಕಬ್ಬಿಣಾಂಶ ಮಾತ್ರೆಗಳ ವಿತರಣೆ, ಪ್ರತಿ ತಿಂಗಳು ವೈದ್ಯರಿಂದ ತಪಾಸಣೆ ರಕ್ತಪರೀಕ್ಷೆ ಹುಟ್ಟಿನಿಂದ ಒಂದು ವರ್ಷದೊಳಗಿನ ಮಕ್ಕಳಿಗೆ ನೀಡಬೇಕಾದ ಲಸಿಕೆ ಕುರಿತು ಪಾಲಕರಿಗೆ ಮನನ ಮಾಡುವ ಮಹತ್ವಪೂರ್ಣ ಕಾರ್ಯಕ್ರಮ ಇದಾಗಿದೆ.
ಜಿಲ್ಲೆಯಲ್ಲಿ  ಪ್ರತಿ ತಿಂಗಳ 9 ಮತು 24 ತಾರೀಖಿನಂದು ಎಲ್ಲಾ ಗರ್ಭಿಣಿಯರ ತಪಾಸಣೆಯನ್ನು ಮಾಡಲಾಗುತ್ತಿದ್ದು, ಎಲ್ಲಾ ಮಾಹಿತಿಯನ್ನು ಪೋನ್ ಮೂಲಕ ಪಾಲಕರಿಗೆ ಮಾಹಿತಿ ವಿನಿಮಯ ಮಾಡುವ ಮೂಲಕ ಮಗುವಿನ ಆರೋಗ್ಯದ ಕಾಳಜಿ ವಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಹೆಚ್.ಆರ್. ತಿಮ್ಮಯ್ಯ ತಿಳಿಸಿದ್ದಾರೆ.

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page