August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ದಾಸಕೋಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ದಾಸಕೋಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ  ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು ಹಾಗೂ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಪುಟಾಣಿ ದಿಶ್ಯಾಂತ್ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರುಕ್ಮಯ ಪೂಜಾರಿ, ಪಂಚಾಯತ್ ಉಪಾಧ್ಯಕ್ಷೆ  ರಂಜಿನಿ, ಸದಸ್ಯ ವಿಠಲ ನಾಯ್ಕ, ಬಂಟ್ವಾಳ ರಬ್ಬರ್ ಮತ್ತು ಜೇನು ವ್ಯವಸಾಯ ಸಂಘದ ಉಪಾಧ್ಯಕ್ಷ ಮೋಹನ್ ಪಿ.ಎಸ್., ಅಂಗವಾಡಿ ಇಲಾಖೆ ಮೇಲ್ವಿಚಾರಕಿ ಲೀಲಾವತಿ, ಪಿಡಿಓ ಸಂಧ್ಯಾ, ಬಾಲವಿಕಾಸ ಸಮಿತಿ ಸದಸ್ಯ ಚಂದ್ರಶೇಖರ್, ಹಿರಿಯರಾದ ಕಲಾವತಿ ಭಟ್,  ಸವಿತಾ ಗೋಪಾಲ್, ಅಂಗನವಾಡಿ ಕಾರ್ಯಕರ್ತೆ ಲಲಿತಾ, ಸಹಾಯಕಿ ಯಶೋಧ, ಸಲಹಾ ಸಮಿತಿ ಅಧ್ಯಕ್ಷೆ ಶುಭ, ಯೋಗ ಶಿಕ್ಷಕಿ ‌ಶ್ರೀಕೃಷ್ಣ, ಶ್ರೀದೇವಿ, ಶ್ರೀ ರಾಮ ಮತ್ತು ಶ್ರೀ ದುರ್ಗಾ ಸ್ತ್ರೀಶಕ್ತಿ ಸದಸ್ಯರು, ಪುಟಾಣಿಗಳು, ಪೋಷಕರು ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page