ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಬುಡೋಳಿ ಆಶ್ರಫ್ ಕರಾವಳಿ ನಿಧನ
ಬಂಟ್ವಾಳ: ಮಾಣಿ ಸಮೀಪದ ಬುಡೋಳಿ ನಿವಾಸಿ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಆಶ್ರಫ್ ಕರಾವಳಿ (52) ಹೃದಯಾಘಾತದಿಂದ ಇಂದು ನವಂಬರ್ 15ರಂದು ಶುಕ್ರವಾರ ಮಧ್ಯಾಹ್ನ ನಿಧನರಾದರು.
ಅಶ್ರಫ್ ಅವರು ಶುಕ್ರವಾರದ ನಮಾಜಿಗೆ ಗಡಿಯಾರ ಮಸೀದಿಗೆ ತೆರಳಿದ್ದು, ನಮಾಜ್ ನಿರ್ವಹಿಸಿ ಮಸೀದಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿತು. ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅಶ್ರಫ್ ಅವರು ಬುಡೋಳಿ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯ ಅದ್ಯಕ್ಷರಾಗಿದ್ದಾರೆ. ಗಡಿಯಾರ ಜುಮಾ ಮಸೀದಿ, ಕಲ್ಲಡ್ಕ ರೇಂಜ್ ಮದ್ರಸ ಮೆನೇಜ್ ಮೆಂಟ್ ಇದರ ಕಾರ್ಯದರ್ಶಿಯಾಗಿ ಹಾಗೂ ಇನ್ನಿತರ ಧಾರ್ಮಿಕ ಮತ್ತು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಮೃತರು ಪತ್ನಿ, ಪುತ್ರ, ಮೂವರು ಪುತ್ರಿಯರು, ತಂದೆ ಸುಲೈಮಾನ್ ಸಹಿತ 7 ಮಂದಿ ಸಹೋದರರು, ಓರ್ವ ಸಹೋದರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.