June 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಾಳ್ತಿಲ, ಕುದ್ರೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಗ್ರಂಥಾಲಯ ಕೊಠಡಿ ಮತ್ತು ಅಂಗನವಾಡಿ ಕೇಂದ್ರದ ಆಟಿಕಾವನ ಉದ್ಘಾಟನೆ

ಬಂಟ್ವಾಳ : ಬಾಳ್ತಿಲ, ಕುದ್ರೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಗ್ರಂಥಾಲಯ ಕೊಠಡಿ ಮತ್ತು ಅಂಗನವಾಡಿ ಕೇಂದ್ರದ ಆಟಿಕಾವನ ವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಇವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಮಕ್ಕಳಿಗೆ ಶೈಕ್ಷಣಿಕ ಮನೋಭಾವವನ್ನು ಮೂಡಿಸುವ ಪ್ರಾರಂಭಿಕ ಹಂತವೇ ಅಂಗನವಾಡಿಯಾಗಿದೆ. ಇಲ್ಲಿ ಆಟ, ಪಾಠದ ಜೊತೆಗೆ ಸಂಸ್ಕಾರದ ಜೀವನಕ್ಕೆ ಮೂಲ ತಳಹದಿ ಎಂದ ಅವರು ಈ ನಿಟ್ಟಿನಲ್ಲಿ ಪರಿಪೂರ್ಣ ವ್ಯವಸ್ಥೆಯನ್ನು ಕಲ್ಪಿಸಲು ಇಲಾಖೆ ಜೊತೆ ಸಹಕಾರ ನೀಡಿದ ಕಂಪೆನಿ ಹಾಗೂ ಗ್ರಾಮದ ಸರ್ವರಿಗೂ ಅಭಿನಂದನೆ ಸಲ್ಲಬೇಕು ಎಂದರು.

ಬಾಳ್ತಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರಂಜಿನಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಭೆಯನ್ನುದ್ದೇಶಿಸಿ ಮಾಜಿ ಶಾಸಕ ಎ. ರುಕ್ಮಯ ಪೂಜಾರಿ ಮಾತನಾಡಿದರು. ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಆರ್. ಚೆನ್ನಪ್ಪ ಕೋಟ್ಯಾನ್, ಎಂ.ಆರ್.ಪಿ.ಎಲ್. ನ ವಿಕ್ರಮ್ ನಾಯಕ್, ಗ್ರಾಮ ಪಂಚಾಯತ್ ಸದಸ್ಯರಾದ ವಿಠಲ್ ನಾಯ್ಕ್, ಲೀಲಾವತಿ, ಲತೀಶ್,  ದೇವಿಕಾ, ಉಷಾ, ಸುಂದರ ಸಾಲಿಯಾನ್, ಮಮತಾ, ಮೋಹನ್ ಪ್ರಭು, ಸುರೇಖಾ, ಸುಜಾತ, ಶಿವರಾಜ್ ಮತ್ತಿತರರು ಉಪಸ್ಥಿತರಿದ್ದರು.

You may also like

News

EVIDENCIA 2026 -Strengthens Evidence-Based Homoeopathic Research

Father Muller Homoeopathic Medical College and Hospital, in association with the Indian Homoeopathic Medical Association (IHMA), Mangaluru Chapter, and the
News

ಕೋಳಿ ಅಂಕದ ಜೂಜಾಟದ ಅಡ್ಡೆಗೆ ವಿಟ್ಲ ಪೊಲೀಸರ ದಿಢೀರ್ ದಾಳಿ – ಮೂವರ ಬಂಧನ, ಸೊತ್ತುಗಳ ವಶ

ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಪ್ರದೇಶದಲ್ಲಿ ಅಕ್ರಮವಾಗಿ ಹಣ ಪಣವಾಗಿಟ್ಟು ಕೋಳಿ ಅಂಕ ಜೂಜಾಟ ಆಡುತ್ತಿದ್ದ ಜಾಗಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿರುವ

You cannot copy content of this page