ಸಿಡಿಲು ಬಡಿದು ಬಾಲಕ ಮೃತ್ಯು
ಬಂಟ್ವಾಳ : ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಕೆದಿಲ ಗ್ರಾಮದ ಮುರಿಯಾಜೆ ಎಂಬಲ್ಲಿ ನವಂಬರ್ 18ರಂದು ಭಾನುವಾರ ಸಂಜೆ ನಡೆದಿದಿರುವ ಬಗ್ಗೆ ವರದಿಯಾಗಿದೆ. ಮೃತನನ್ನು ಸ್ಥಳೀಯ ನಿವಾಸಿ ಚಂದ್ರಹಾಸ ಎಂಬವರ ಪುತ್ರ 14 ವರ್ಷ ಪ್ರಾಯದ ಸುಭೋದ್ ಸಿ. ಎಂದು ಗುರುತಿಸಲಾಗಿದೆ. ಬಾಲಕ ಕಲ್ಲಡ್ಕ ಶ್ರೀರಾಮ ಪೌಡಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ವಿಟ್ಲ ಕಂದಾಯ ನಿರೀಕ್ಷಕ ಪ್ರಶಾಂತ್ ಶೆಟ್ಟಿ, ಕೆದಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್, ಕೆದಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ್ ವಾಲ್ತಾಜೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.