January 18, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಶ್ರಮದಾನ ಹಾಗೂ ಮಾಸಿಕ ಸಭೆ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗದ  ಸದಸ್ಯರು ಬಂಟ್ವಾಳ ತಾಲೂಕಿನ ವಗ್ಗದ ದೊಂಪದ ಪಲಿಕೆಯಿಂದ ಕಾಡಬೆಟ್ಟು ಅಂತರಂಗಡಿ ತನಕ ಸುಮಾರು ಒಂದುವರೆ ಕಿಲೋಮೀಟರ್ ರಸ್ತೆ ಬದಿ ಬೆಲೆದ ಬಲ್ಲೆ, ಹುಲ್ಲು, ಗಿಡ ಗಂಟೆಗಳನ್ನು  ಕಡಿದು  ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಮಾಡಿದರು.

ಈ ಶ್ರಮದಾನ ಕಾರ್ಯಕ್ರಮಕ್ಕೆ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ., ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಪ್ರಮೋದ್ ಕುಮಾರ್ ರೈ ಶ್ರಮದಾನದ ಸಂದರ್ಭ ಭಾಗವಹಿಸಿ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹಿಸಿದರು.

ಶ್ರಮಧಾನ ಕಾರ್ಯದಲ್ಲಿ ಶೌರ್ಯ ಘಟಕ ಕಾಡಬೆಟ್ಟು ವಗ್ಗದ ಸಂಯೋಜಕಿ ರೇಖಾ ಪಿ., ಘಟಕ ಪ್ರತಿನಿಧಿ ಪ್ರವೀಣ್, ಸದಸ್ಯರುಗಳಾದ ಸಂಪತ್ ಶೆಟ್ಟಿ, ಮಹಾಬಲ ರೈ, ನಾರಾಯಣ್ ಪೂಜಾರಿ, ನಾರಾಯಣ್ ಶೆಟ್ಟಿ, ಲಕ್ಷ್ಮಣ್, ಆನಂದ, ಮೋಹನಂದ, ರೋಹಿತ್, ಪವನ್, ಜನಾರ್ಧನ, ಅಶೋಕ, ರಮೇಶ, ಪ್ರಮೀಳಾ, ಪ್ರಿಯಾಂಕ, ಶಶಿಕಲಾ, ಪವಿತ್ರ ಮಧ್ವ, ಭಾಗವಹಿಸಿದ್ದರು. ಶ್ರಮಧಾನ ಕಾರ್ಯಕ್ರಮದ ಬಳಿಕ ತಂಡದ ಮಾಸಿಕ ಸಭೆಯನ್ನು ನಡೆಸಿ ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.

You may also like

News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ
News

ಬಹ್ರೇನ್ನಲ್ಲಿ 71 ಕೋಟಿ ರೂಪಾಯಿ ಲಾಟರಿ ಗೆದ್ದ ಕೇರಳ ಮೂಲದ ನರ್ಸ್ ಮನು  ಮೋಹನನ್

ಬಹ್ರೇನ್ನಲ್ಲಿ ನರ್ಸಿಂಗ್ ಕೆಲಸ ಮಾಡುತ್ತಿರುವ ಕೇರಳದ 36 ವರ್ಷದ ಆಂಬ್ಯುಲೆನ್ಸ್ ನರ್ಸ್ ಮನು ಮೋಹನನ್ ಇವರಿಗೆ ಬಿಗ್ ಟಿಕೆಟ್ ಲಾಟರಿಯಲ್ಲಿ 71 ಕೋಟಿ ರೂಪಾಯಿ (30 ಮಿಲಿಯನ್

You cannot copy content of this page