August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುಂಜಾಲಕಟ್ಟೆ ವಲಯದ ಉಳಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ವಲಯದ ಉಳಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ನವಂಬರ್ 18ರಂದು ಸೋಮವಾರ ಬಂಟ್ವಾಳ ತಾಲೂಕಿನ ಉಳಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜರಗಿತು.

ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಉಳಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚೆನ್ನಪ್ಪ ಸಾಲ್ಯಾನ್ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಅನೇಕ ಸೌಲಭ್ಯ ದೊರೆಯುತ್ತಿತ್ತು, ಅದರಲ್ಲೂ ಮಹಿಳೆಯರಿಗೆ ಧೈರ್ಯ ತುಂಬುವ ಕಾರ್ಯ ಜ್ಞಾನವಿಕಾಸ ಕೇಂದ್ರದ ಮೂಲಕ  ನಡೆಯುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಅಧ್ಯಕ್ಷರು ಚಿದಾನಂದ ರೈ ಕಕ್ಯೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ರವರು ಮಾತನಾಡಿ ಮಹಿಳೆಯರು ನಾಲ್ಕು ಗೋಡೆಗಳ ಮದ್ಯೆ ಬಂದಿಯಾಗದೆ ಹೊರಗಿನ ಪ್ರಪಂಚ ಜ್ಞಾನ ತಿಳಿದು ಕೊಳ್ಳಬೇಕು. ಬಡತನ ನಿವಾರಣೆಗೋಸ್ಕರ ಈ ಜ್ಞಾನವಿಕಾಸ ಕೇಂದ್ರ ಪ್ರಾರಂಭವಾಗಿ ಆ ಮೂಲಕ ಮಹಿಳೆಯರು ಸ್ವ ಉದ್ಯೋಗ ಮಾಡಿಕೊಂಡು ಯಶಸ್ವಿಯಾಗಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಉಳಿ ಸರಕಾರಿ  ಪ್ರಾಥಮಿಕ ಶಾಲೆಯ ನಿರ್ವತ ಮುಖ್ಯ ಶಿಕ್ಷಕ  ಹಮಿದ್ ರವರನ್ನು ಅಭಿನಂದಿಸಿ ಗೌರವಿಸಲಾಯಿತು. ಹಿರಿಯ ಸದಸ್ಯೆ ಅಪ್ಪಿಯವರು ಕೇಂದ್ರದ ಅನಿಸಿಕೆ ವ್ಯಕ್ತಪಡಿಸಿದರು. ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ವೇದಿಕೆಯಲ್ಲಿ ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ., ಜ್ಞಾನವಿಕಾಸ ಕೇಂದ್ರದ ಹಿರಿಯ ಸದಸ್ಯೆ ಸುಂದರಿ, ಉಳಿ ಶಾಲೆಯ ಮುಖ್ಯ ಶಿಕ್ಷಕಿ ವಿಶಾಲಾಕ್ಷಿ, ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರುಗಳು, ಒಕ್ಕೂಟದ ಪದಾಧಿಕಾರಿಗಳು ಸದಸ್ಯರುಗಳು, ಸೇವಾಪ್ರತಿನಿಧಿ ಉಷಾ, ವಿ.ಎಲ್.ಇ. ಸುಶ್ಮಿತಾ, ಉಪಸ್ಥಿತರಿದ್ದರು.

ವಲಯದ ಮೇಲ್ವಿಚಾರಕಿ ಸವಿತಾ ಸ್ವಾಗತಿಸಿ,  ಜ್ಞಾನ ವಿಕಾಸ ಕೇಂದ್ರದ ಸಯೋಜಕಿ ಪ್ರೇಮ ವರದಿ ಮಂಡಿಸಿ, ಸೇವಾಪ್ರತಿನಿಧಿ ಶೇಖರ್ ವಂದಿಸಿದರು. ಸೇವಾಪ್ರತಿನಿಧಿ ಅಮೃತ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಿದರು. ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರುತಿ ಕಾರ್ಯಕ್ರಮ ನಿರೂಪಿಸಿದರು.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page