ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ವಿಶ್ವ ಮಧುಮೇಹ ದಿನ ಜಾಗೃತಿ ಕಾರ್ಯಕ್ರಮ

ಮಂಗಳೂರು ನವಂಬರ್ 20 : ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್‌ನ ಮೆಡಿಕಲ್ ಸರ್ಜಿಕಲ್ ನರ್ಸಿಂಗ್ ವಿಭಾಗದ ವತಿಯಿಂದ ವಿಶ್ವ ಮಧುಮೇಹ ದಿನದ ಪ್ರಯುಕ್ತ ಜಾಗೃತಿ ಕಾರ್ಯಕ್ರಮವನ್ನು ನವಂಬರ್ 14ರಂದು ಕುಂಟಿಕಾನದಲ್ಲಿರುವ ಎ.ಜೆ. ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಎ.ಜೆ. ಆಸ್ಪತ್ರೆಯ ಜನರಲ್ ಮೆಡಿಸಿನ್ ವಿಭಾಗದ ಸಹಾಯಕ ಪ್ರಾಧ್ಯಾಪಿಕೆ ಡಾ| ಪ್ರಣಮ್ಯ ಜೈನ್ ಅವರು ಮಧುಮೇಹ ಮತ್ತು ಇದರ ಕಾರಣಗಳು ಹಾಗೂ ತಡೆಗಟ್ಟುವಿಕೆಯ ಬಗ್ಗೆ ವಿವರಿಸಿದರು.
ಈ ಕಾರ್ಯಕ್ರಮದಲ್ಲಿ ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲ ಡಾ| ಲಾರಿಸ್ಸಾ ಮಾರ್ಥ ಸಾಮ್ಸ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕಿ ರಮ್ಯಾ ಅವರು ದಿನದ ಧೈಯದ ಬಗ್ಗೆ ವಿವರಿಸಿದರು. ಬಿ.ಎಸ್.ಸಿ ನಾಲ್ಕನೇ ಸೆಮಿಸ್ಟರ್ ನರ್ಸಿಂಗ್ ವಿದ್ಯಾರ್ಥಿಗಳು ಮಧುಮೇಹ ತಡೆಗಟ್ಟುವಿಕೆಯ ಕುರಿತಾದ ಕಿರು ನಾಟಕವನ್ನು ಪ್ರದರ್ಶಿಸಿದರು. ವಿದ್ಯಾರ್ಥಿನಿ ಶಾಲನ್ ರಿಯಾ ಮಾರ್ಟಿಸ್ ಕಾರ್ಯಕ್ರಮ ನಿರೂಪಿಸಿದರು. ಮಧುಮೇಹ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಭಿತ್ತಿಪತ್ರ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.