April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಣಿನಾಲ್ಕೂರು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ವಿಲೇವಾರಿ ಶಿಬಿರ, ಮಾಜಿ ಸಚಿವ ಬಿ. ರಮಾನಾಥ ರೈ ಅವರಿಂದ ಚಾಲನೆ

ಬಂಟ್ವಾಳ : ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ ಮತ್ತು ಯಶಸ್ವಿಗೊಳಿಸುವಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಮಟ್ಟ ಮತ್ತು ತಾಲ್ಲೂಕು ಮಟ್ಟದಲ್ಲಿ ಅನುಷ್ಠಾನ ಸಮಿತಿ ರಚಿಸಿದ್ದಾರೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ಅವರು ಇಲ್ಲಿನ ಮಣಿನಾಲ್ಕೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯಲ್ಲಿ ನವಂಬರ್ 19ರಂದು ಮಂಗಳವಾರ ನಡೆದ ಪಂಚ ಗ್ಯಾರಂಟಿ ಅನುಷ್ಠಾನ ವಿಲೇವಾರಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. 

      ಮಣಿನಾಲ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ ಕಾರ್ಯಕ್ರಮ ಉದ್ಘಾಟಿಸಿದರು. ಬಂಟ್ವಾಳ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಮಾತನಾಡಿ, ‘ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯು ಪ್ರತೀ ವಲಯ ಮಟ್ಟದಲ್ಲಿ ಶಿಬಿರಗಳನ್ನು ನಡೆಸಿ ಅರ್ಹರಿಗೆ ಯೋಜನೆಯ ಪ್ರಯೋಜನ ದೊರಕಿಸಿ ಕೊಡುವಲ್ಲಿ ಶ್ರಮಿಸುತ್ತಿದೆ’ ಎಂದರು.

    ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ, ಪುರಸಭೆ ಅಧ್ಯಕ್ಷ ವಾಸು ಪೂಜಾರಿ ಲೊರೆಟ್ಟೊ, ಬೂಡ ಅಧ್ಯಕ್ಷ ಬೇಬಿ ಕುಂದರ್, ಮಾಜಿ ಅಧ್ಯಕ್ಷ ಪಿಯೂಸ್ ಎಲ್. ರೊಡ್ರಿಗಸ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ. ಪದ್ಮಶೇಖರ ಜೈನ್, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ ಮುಂಡ್ರೇಲುಗುತ್ತು, ಬಂಟ್ವಾಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶಿವಪ್ಪ ಪೂಜಾರಿ ಹಟದಡ್ಕ, ಪುರಸಭಾ ನಾಮ ನಿರ್ದೇಶಿತ ಸದಸ್ಯ ಜಗದೀಶ ಕುಂದರ್, ಅನುಷ್ಠಾನ ಸಮಿತಿ ಸದಸ್ಯರಾದ ಐಡಾ ಸುರೇಶ್, ಮಹಮ್ಮದ್ ಸಿರಾಜ್, ಚಂದ್ರಶೇಖರ ಆಚಾರ್ಯ, ಸುಧೀಂದ್ರ ಶೆಟ್ಟಿ,  ಸತೀಶ್, ಮುರಳೀಧರ ಪೈ, ವಿನಯ್ ಕುಮಾರ್, ಕಾಂಚಲಾಕ್ಷಿ, ಹರ್ಷನ್ ಬಿ., ಪವಿತ್ರಾ ಕೆ.. ಅಬ್ದುಲ್ ಮಜೀದ್, ಜನಾರ್ದನ, ಕೃಷ್ಣಪ್ಪ ಪೂಜಾರಿ, ನಾರಾಯಣ ನಾಯ್ಕ್, ಗ್ರಾಮ ಪಂಚಾಯತ್ ಸದಸ್ಯರಾದ ವಿನ್ಸೆಂಟ್, ಪ್ರೆಸಿಲ್ಲಾ, ಯೋಗೀಶ್ ಶೆಟ್ಟಿ, ಪ್ರೇಮಾ, ಬಾಲಕೃಷ್ಣ ಪೂಜಾರಿ, ಶಾಂತಪ್ಪ ಪೂಜಾರಿ, ಕುಸುಮಾ, ದಯಾನಂದ ನಾಯ್ಕ, ಗೀತಾ ಪ್ರಮುಖರಾದ ಬಾಲಕೃಷ್ಣ ಅಂಚನ್, ಮಲ್ಲಿಕಾ ಶೆಟ್ಟಿ, ಲವಿನಾ ಮೊರಾಸ್ ಮತ್ತಿತರರು ಉಪಸ್ಥಿತರಿದ್ದರು.

     ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಿಲ್ವಿಯಾ ಫೆರ್ನಾಂಡಿಸ್ ಸ್ವಾಗತಿಸಿ, ಗ್ರಾಮ ಪಂಚಾಯತ್  ಸದಸ್ಯ ಫಾರೂಕ್ ಕಾರ್ಯಕ್ರಮ ನಿರೂಪಿಸಿದರು.

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page